ಬೆಂಗಳೂರು: ರಾಜಕೀಯ ಪ್ರವೇಶದ ಬಳಿಕವೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ. ಮಂಜುನಾಥ್ (Dr C N Manjunath) ಅವರು ವೈದ್ಯಕೀಯ ವೃತ್ತಿ ಮುಂದುವರೆಸಿದ್ದಾರೆ.
ಮೂತ್ರಪಿಂಡ ವೈಫಲ್ಯ ಜೊತೆಗೆ ಹೃದಯ ಸಮಸ್ಯೆ ಹೊಂದಿದ್ದ 54 ವರ್ಷದ ರೋಗಿಗೆ ಹೃದಯದ ರಕ್ತನಾಳಗಳಲ್ಲಿ ಶೇ.90ರಷ್ಟು ರಕ್ತ ಪರಿಚಲನೆ ಸ್ಥಗಿತವಾಗಿತ್ತು. ಪರೀಕ್ಷೆ ನಡೆಸಿ ಹೊಸ ಆರ್ಬಿಟಲ್ ಅಥೆರೆಕ್ಟಮಿ ಸಾಧನ ಬಳಸಿ ಸಂಸದರು ಮತ್ತು ಹಿರಿಯ ವೈದ್ಯರಾದ ಡಾ.ಮಂಜುನಾಥ್ ನೇತೃತ್ವದಲ್ಲಿ ಶಸ್ತ್ರ ಚಿಕಿತ್ಸೆ ಯಶಸ್ವಿ ಮಾಡಲಾಯಿತು. ಇದನ್ನೂ ಓದಿ: ಪಿತ್ರಾರ್ಜಿತ ಆಸ್ತಿ ವಿವಾದ: ತಮ್ಮಂದಿರಿಂದಲೇ ಅಣ್ಣನ ಕೊಲೆ
Successfully performed a complex angioplasty and stent procedure on a 54-year-old patient with kidney failure, addressing a heavily calcified 90% blockage.
The procedure utilised the relatively new Orbital Atherectomy device, ensuring the patient received the best possible care… pic.twitter.com/So9HRnz8Lr
— Dr.C.N.Manjunath (@DrCNManjunath) August 22, 2024
ರೋಗಿಯು ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅರ್ಬಿಟಲ್ ಅಥೆರೆಕ್ಟಮಿ ಸಾಧನಕ್ಕೆ 3 ಲಕ್ಷ ರೂ. ಬೇಕಾಗಿತ್ತು. ಆದರೆ ಸಂಸದರ ವಿನಂತಿ ಮೇರೆಗೆ ಈ ಸಾಧನವನ್ನು ಉಚಿತವಾಗಿ ಒದಗಿಸಲಾಗಿದೆ. ಇದನ್ನೂ ಓದಿ: ಮುಡಾ ಸೈಟ್ ಪಡೆಯಲು ಸಿಎಂ ಪತ್ನಿ ಡಿಮ್ಯಾಂಡ್ – ಸಿಎಂ ವಿರುದ್ಧ ಹೆಚ್‌ಡಿಕೆ ಕಿಡಿ
ರಾಜಕೀಯ ಪ್ರವೇಶಿಸಿದ ಬಳಿಕವೂ ವೈದ್ಯಕೀಯ ಸೇವೆ ಮುಂದುವರೆಸಿರುವುದಕ್ಕೆ ಡಾ.ಮಂಜುನಾಥ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಮೋದಿ ಉತ್ತರಾಧಿಕಾರಿ ಯಾರು? ಅಮಿತ್ ಶಾ, ಗಡ್ಕರಿ, ಯೋಗಿ.. ಯಾರಿಗೆ ಹೆಚ್ಚು ಜನರ ಒಲವು?