ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಗರಿ ಮಂಡ್ಯದಲ್ಲಿ (Mandya) ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ಶುಕ್ರವಾರ (ಡಿ.20) ಚಾಲನೆ ಸಿಗಲಿದೆ. ಈ ಹಿನ್ನೆಲೆ ಸಮ್ಮೇಳನಕ್ಕೆ ಬರುವವರಿಗೆ ಭರ್ಜರಿ ಭೋಜನದ (Dinner) ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
Advertisement
ಉಪಾಹಾರ ಹಾಗೂ ಊಟ ನೀಡಲು 140 ಕೌಂಟರ್‌ಗಳನ್ನು ತೆರೆಯಲಾಗಿದೆ. ಸಮ್ಮೇಳನದಲ್ಲಿ ಭಾಗವಹಿಸುವ ಎಲ್ಲರಿಗೂ ಒಂದೇ ಮೆನುವನ್ನು ಈಗಾಗಲೇ ಸಿದ್ಧ ಮಾಡಲಾಗಿದೆ. ನೂರಾರು ಬಾಣಸಿಗರು (Chefs) ಹಾಗೂ ಸಾವಿರಾರು ಸಹಾಯಕರಿಂದ ಖಾದ್ಯಗಳು ತಯಾರಿಯಾಗುತ್ತಿವೆ. ಇದನ್ನೂ ಓದಿ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಾಡು ಸಿದ್ಧ – ʻನುಡಿ ಜಾತ್ರೆಯ ಸ್ವರ ಯಾತ್ರೆʼ
Advertisement
Advertisement
ಈಗಾಗಲೇ ಸಿಹಿ ತಿನಿಸು ತಯಾರಿಕೆ ಕಾರ್ಯ ಆರಂಭವಾಗಿದ್ದು ಹೋಳಿಗೆ, ಮೈಸೂರು ಪಾಕ್ (Mysuru Pak), ಬರ್ಫಿ, ಲಾಡುಗಳನ್ನು ಬಾಣಸಿಗರು ತಯಾರು ಮಾಡಿದ್ದಾರೆ. ಇದನ್ನೂ ಓದಿ: ಸಕ್ಕರೆನಾಡು ಮಂಡ್ಯ ಕೇಸರಿಮಯ – ಹನುಮ ಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ
Advertisement
ಶುಕ್ರವಾರದಿಂದ ಮೆನು ಪ್ರಕಾರ ಊಟ ರೆಡಿಯಾಗಲಿದ್ದು, ಮಂಡ್ಯ ಶೈಲಿಯಲ್ಲಿ ಈ ಬಾರಿ ಊಟ ಇರಲಿದೆ. ಜೊತೆಗೆ ರಾಜ್ಯದ ಪ್ರಮುಖ ಊಟದ ಮೆನು ಸಹ ಇರಲಿದೆ. ಮೂರು ದಿನವೂ ಬೆಳಿಗ್ಗೆ ತಿಂಡಿ, ಮಧ್ಯಾಹ್ನ ಹಾಗೂ ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿದೆ.