ರಾಯಚೂರು: ಶಾಲಾ ಸಮವಸ್ತ್ರದಲ್ಲೇ ಬಾಲಕ ಮಲ ವಿಸರ್ಜನೆ ಮಾಡಿಕೊಂಡಿದ್ದಕ್ಕೆ ಸಿಟ್ಟಾದ ಶಿಕ್ಷಕ 8 ವರ್ಷದ ಬಾಲಕನ ಮೇಲೆ ಬಿಸಿನೀರು (Hot Water) ಸುರಿದು ವಿಕೃತಿ ಮೆರೆದಿರುವ ಘಟನೆ ರಾಯಚೂರಿನ ಮಸ್ಕಿ ತಾಲೂಕಿನಲ್ಲಿ ನಡೆದಿದೆ.
ಮಸ್ಕಿಯ ಸಂತೆಕೆಲ್ಲೂರು ಗ್ರಾಮದಲ್ಲಿ 2ನೇ ತರಗತಿಯ ವಿದ್ಯಾರ್ಥಿ ಅಖಿತ್ (8)ಗೆ ಗಂಭೀರ ಗಾಯಗಳಾಗಿದ್ದು, ಶಿಕ್ಷಕನ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮತ್ತೊಂದು ಇತಿಹಾಸ – ಡೈಮಂಡ್ ಟ್ರೋಫಿ ಗೆದ್ದ ನೀರಜ್ ಚೋಪ್ರಾ
Advertisement
Advertisement
ಮಿಟ್ಟಿಕೆಲ್ಲೂರು ಮೂಲದ ಗ್ರಾಮದ ವಿದ್ಯಾರ್ಥಿ ಶಾಲೆಗೆ (School) ಹೋದಾಗ ಶಾಲಾ ಸಮವಸ್ತ್ರದಲ್ಲೇ ವಿದ್ಯಾರ್ಥಿ ಮಲ ವಿಸರ್ಜನೆ ಮಾಡಿಕೊಂಡಿದ್ದಾನೆ. ಇದರಿಂದ ಗರಂ ಆದ ಶಿಕ್ಷಕ ವಿದ್ಯಾರ್ಥಿ ಮೇಲೆ ಬಿಸಿ ನೀರು ಎರಚಿದ್ದು, ಮಗುವಿನ ದೇಹದ ಶೇ.40ರಷ್ಟು ಭಾಗ ಬೆಂದು ಗಂಭೀರ ಗಾಯಗಳಾಗಿವೆ. ಇದನ್ನೂ ಓದಿ: 12 ವರ್ಷಗಳ ಬಳಿಕ ಕೋಡಿ ಬಿದ್ದ ಬೃಹತ್ ಕೆರೆ – ರೈತರ ಮೊಗದಲ್ಲಿ ಮಂದಹಾಸ
Advertisement
Advertisement
ಮಗುವನ್ನು ಲಿಂಗಸುಗೂರು ತಾಲೂಕು ಅಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಸೆಪ್ಟಂಬರ್ 2ರಂದು ಘಟನೆ ನಡೆದಿದೆ. ಘಟನೆ ನಡೆದು ಒಂದು ತಿಂಗಳಾದರೂ ದೂರು ದಾಖಲಿಸಿಕೊಳ್ಳಲು ಮಸ್ಕಿ ಪೊಲೀಸರು (Police) ಹಿಂದೇಟು ಹಾಕಿದ್ದಾರೆ. ಅಲ್ಲದೇ ಮಗುವಿಗೆ ಅನ್ಯಾಯ ನಡೆದರೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿಲ್ಲ. ಕೂಡಲೇ ಶಿಕ್ಷಕನ ವಿರುದ್ದ ಕಠಿಣ ಕ್ರಮಕ್ಕೆ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಸದ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆಯುತ್ತಿದ್ದಾರೆ.