ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಜಲ್ಲಿಕಲ್ಲು ಸಾಗಿಸುತ್ತಿದ್ದ ಟಿಪ್ಪರ್ (Tipper) ಲಾರಿಯೊಂದು ಹೋಟೆಲ್‌ಗೆ (Hotel) ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಚಿಂತಾಮಣಿ (Chintamani) ನಗರದ ಕೋಲಾರ ರಸ್ತೆಯಲ್ಲಿ ನಡೆದಿದೆ.
ಘಟನೆಯಲ್ಲಿ ಹೋಟೆಲ್‌ನ ಕ್ಯಾಷಿಯರ್ ಶಿವಾನಂದ್ ಹಾಗೂ ಶಾಂತಕುಮಾರ್ ಎಂಬುವವರು ಮೃತಪಟ್ಟಿದ್ದಾರೆ. ಇನ್ನೂ ಮುರುಳಿ ಹಾಗೂ ಶ್ರೀನಿವಾಸ್ ಬಾಬು ಎಂಬುವವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ತಲೆ ಓಪನ್ – ‘ಡಿ’ ಗ್ಯಾಂಗ್ ಭೀಕರ ಕ್ರೌರ್ಯ ಫೋಟೊಗಳಿಂದ ಬಹಿರಂಗ
ಕೋಲಾರ (Kolar) ರಸ್ತೆಯ ದರ್ಶಿನಿ ಫಾಸ್ಟ್ ಫುಡ್‌ನಲ್ಲಿ ಘಟನೆ ನಡೆದಿದ್ದು, ಘಟನೆಯ ಬಳಿಕ ಟಿಪ್ಪರ್ ಚಾಲಕ ಎಸ್ಕೇಪ್ ಆಗಿದ್ದಾನೆ. ಚಿಂತಾಮಣಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಶಾಲಾ-ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ