ಕೋಲಾರ: ಇವಿಎಂ ಮೆಷಿನ್ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಬ್ಲಾಸ್ಟ್ ಆದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ.
ಮುಳಬಾಗಿಲಿನಿಂದ ಕೋಲಾರದ ಸ್ಟ್ರಾಂಗ್ ರೂಂಗೆ ಇವಿಎಂ ಸಾಗಿಸಲಾಗುತ್ತಿತ್ತು. ಈ ವೇಳೆ ಕೋಲಾರ (Kolar) ತಾಲೂಕು ವಡಗೂರ್ ಗೇಟ್ ಬಳಿ ಟೈರ್ ಬ್ಲಾಸ್ಟ್ ಆಗಿದೆ. ಪರಿಣಾಮ ಸುಮಾರು 1 ಗಂಟೆಗಳ ಕಾಲ ವಾಹನ ರಸ್ತೆಯಲ್ಲಿಯೇ ನಿಲ್ಲುವಂತಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲೇ ಅತಿ ಹೆಚ್ಚು – ಯಾವ ಕ್ಷೇತ್ರದಲ್ಲಿ ಎಷ್ಟು ವೋಟಿಂಗ್?
Advertisement
Advertisement
ಕ್ಯಾಂಟರ್ ಸೀಲ್ ಮಾಡಿರುವುದರಿಂದ ವಾಹನ ರಿಪೇರಿಯಾದ ನಂತರ ಸ್ಟ್ರಾಂಗ್ ರೂಂಗೆ ರವಾನೆ ಮಾಡಲಾಗಿದೆ. ವಾಹನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು. ತಹಶಿಲ್ದಾರ್ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದರು.
Advertisement
ಕೋಲಾರದಲ್ಲಿ 78.07% ರಷ್ಟು ಮತದಾನ ನಡೆದಿದೆ. ಕೋಲಾರದಲ್ಲಿ ಕಾಂಗ್ರೆಸ್ನಿಂದ ಕೆ.ವಿ ಗೌತಮ್ ಹಾಗೂ ಮೈತ್ರಿ ಅಭ್ಯರ್ಥಿಯಾಗಿ ಮಲ್ಲೇಶ್ಬಾಬು ಅಖಾಡದಲ್ಲಿದ್ದಾರೆ.