ಬೀದರ್: ಸತತ ಎರಡು ಮೂರು ದಿನಗಳಿಂದ ಗಡಿ ಜಿಲ್ಲೆ ಬೀದರ್‌ನಲ್ಲಿ (Bidar) ಹಾಗೂ ತೆಲಂಗಾಣದಲ್ಲಿ (Telangana) ಧಾರಾಕಾರ ಮಳೆಯಾಗುತ್ತಿರುವ (Rain) ಪರಿಣಾಮ ಬೀದರ್ ಜಿಲ್ಲೆಯ ಜೀವನಾಡಿ ಕಾರಂಜಾ ಜಲಾಶಯ (Karanja Dam) ಸಂಪೂರ್ಣ ಭರ್ತಿಯಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಬುಧವಾರ ಕಾರಂಜಾ ಜಲಾಶಯದಿಂದ ಮಾಂಜ್ರಾನದಿಗೆ ಬರೋಬ್ಬರಿ 7,500 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. 7.69 ಟಿಎಂಸಿ ಸಾಮರ್ಥ್ಯದ ಕಾರಂಜಾ ಜಲಾಶಯ ಸಂಪೂರ್ಣವಾಗಿ ಭರ್ತಿಯಾದ ಹಿನ್ನೆಲೆ ಜಲಾಶಯಕ್ಕೆ ಮುನ್ನೆಚ್ಚರಿಕಾ ಕ್ರಮವಾಗಿ ಮೂರು ಗೇಟ್‌ಗಳ ಮೂಲಕ ನೀರು ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ತಾತನ ಹೆಸರು ಗೊತ್ತಿಲ್ಲವೆಂದರೆ ತಾತ ಇಲ್ಲವೆಂದಲ್ಲ- ಜಿ.ಪರಮೇಶ್ವರ್ ಹೇಳಿಕೆಗೆ ಬಿಜೆಪಿ ಕಿಡಿ
ಬುಧವಾರ ಮತ್ತು ಗುರುವಾರ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಈ ಹಿನ್ನೆಲೆ ಕಾರಂಜಾ ಜಲಾಶಯದಿಂದ ಅಧಿಕಾರಿಗಳು 7,500 ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ಮಳೆ ಕೊರತೆ ನಡುವೆಯೂ ತಮಿಳುನಾಡಿಗೆ ನೀರು- ಸುಪ್ರೀಂಕೋರ್ಟ್‍ನಲ್ಲಿಂದು ಮಹತ್ವದ ವಿಚಾರಣೆ
Web Stories