ಬೆಳಗಾವಿ: ಭಾರೀ ಮಳೆಯ (Rain) ಪರಿಣಾಮ ಬೈಕ್ (Bike) ಮೇಲೆ ಮರವೊಂದು ಉರುಳಿ ಬಿದ್ದು ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿಯ (Belagavi) ಬೆಳಲಳಗುಂದಿ ಗ್ರಾಮದಲ್ಲಿ ನಡೆದಿದೆ.
ಕರ್ಲೆ ಗ್ರಾಮದ ಸೋಮನಾಥ್ ಮುಚ್ಚಂಡಿಕರ್ (21) ಮೃತ ದುರ್ದೈವಿಯಾಗಿದ್ದು, ವಿಠ್ಠಲ್ ತಳವಾರ್, ಸ್ವಪ್ನಿಲ್ ದೇಸಾಯಿ ಗಂಭೀರ ಗಾಯಗೊಂಡವರಾಗಿದ್ದಾರೆ. ಮೂವರು ಒಂದೇ ಬೈಕ್‍ನಲ್ಲಿ ಬೆಳಗಾವಿಗೆ ತೆರಳುತ್ತಿದ್ದರು. ಈ ವೇಳೆ ಧಾರಾಕಾವಾಗಿ ಸುರಿದ ಮಳೆಯ ಪರಿಣಾಮ ಬೈಕ್ ಮೇಲೆ ಮರ ಉರುಳಿ ಬಿದ್ದಿದೆ. ಪರಿಣಾಮ ಸ್ಥಳದಲ್ಲೇ ಓರ್ವ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಟ್ರೈಲರ್ ಸಮೇತ ನದಿಗೆ ಬಿದ್ದ ಟ್ರಾಕ್ಟರ್ – ಓರ್ವ ಕಣ್ಮರೆ, 12 ಮಂದಿ ಬಚಾವ್
ಗಾಯಗೊಂಡಿರುವವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಬಿಳಿಗಿರಿರಂಗನ ಬೆಟ್ಟದ ಮೇಲಿಂದ ಜಿಗಿದು ರಿಯಲ್ ಎಸ್ಟೇಟ್ ಉದ್ಯಮಿ ಆತ್ಮಹತ್ಯೆ