DistrictsKarnatakaLatestLeading NewsMain PostTumakuru

ನಿತ್ಯ ಎಣ್ಣೆ ಹಾಕಿ ಪಾಠ – ಮದ್ಯದೊಂದಿಗೆ ಗ್ರಾಮಸ್ಥರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಶಿಕ್ಷಕಿ

ತುಮಕೂರು: ಬೆಳ್ಳಂಬೆಳಗ್ಗೆ ಮದ್ಯಪಾನ ಮಾಡಿಕೊಂಡು ಪಾಠ ಮಾಡುತ್ತಿದ್ದ ಲೇಡಿ ಟೀಚರ್(Teacher) ಒಬ್ಬಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ವಿಲಕ್ಷಣ ಘಟನೆ ತುಮಕೂರು(Tumkuru) ತಾಲೂಕಿನ ಚಿಕ್ಕಸಾರಂಗಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಕಳೆದ 25 ವರ್ಷಗಳಿಂದ ಈ ಶಾಲೆಯಲ್ಲಿ ಶಿಕ್ಷಕಿ ಗಂಗಲಕ್ಷ್ಮಮ್ಮ ಸೇವೆ ಸಲ್ಲಿಸುತ್ತಿದ್ದಾಳೆ. ಆದರೆ ಕಳೆದ 5 ವರ್ಷದಿಂದ ಮದ್ಯ ವ್ಯಸನಕ್ಕೆ ದಾಸಳಾಗಿದ್ದಳು. ಇದನ್ನೂ ಓದಿ: ಅರ್ಧಂಬರ್ಧ ಮೆಟ್ರೋ ಕಾಮಗಾರಿಯಿಂದಲೇ ಮುಳುಗಿತಾ ಬೆಂಗಳೂರು..?

ಮದ್ಯಪಾನ(Alcohol) ಮಾಡಿ ಪಾಠ ಮಾಡಿ, ವಿದ್ಯಾರ್ಥಿಗಳಿಗೆ ಸುಖಾಸುಮ್ಮನೆ ಹೊಡೆಯುವುದು ಹಾಗೂ ಸಹೋದ್ಯೋಗಿಗಳ ಜೊತೆ ಜಗಳ ಮಾಡುತ್ತಿದ್ದಳು. ಇದರಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಡ್ಡಿಯುಂಟಾಗಿತ್ತು. ಇದನ್ನು ಮನಗಂಡ ಪೋಷಕರು ಶಿಕ್ಷಕಿ ಗಂಗಲಕ್ಷ್ಮಮ್ಮಗೆ ತಪ್ಪು ತಿದ್ದಿಕೊಳ್ಳುವಂತೆ ತಾಕೀತು ಮಾಡಿದ್ದರು. ಆದರೆ ಗಂಗಲಕ್ಷ್ಮಮ್ಮ ತನ್ನ ಚಾಳಿ ಬದಲಿಸಲಿಲ್ಲ. ಇದರಿಂದ ಪೋಷಕರು ಶಾಲೆಗೆ ಬೀಗ ಹಾಕಿ ಶಿಕ್ಷಕಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರು.

ಈ ವೇಳೆ ಸ್ಥಳಕ್ಕೆ ಬಿ.ಇ.ಒ ಹನುಮಾ ನಾಯ್ಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿಕ್ಷಕಿಯ ಟೇಬಲ್‍ನ ಡ್ರಾಯರ್ ಓಪನ್ ಮಾಡುವಂತೆ ಗ್ರಾಮಸ್ಥರು ಒತ್ತಾಯ ಮಾಡಿದರು. ಸ್ವತಃ ಬಿಇಒ ಡ್ರಾಯರ್ ಓಪನ್ ಮಾಡಲು ಹೋದಾಗ ಶಿಕ್ಷಕಿ ಪ್ರತಿರೋಧ ಒಡ್ಡಿದ್ದಾಳೆ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಟೇಬಲನ್ನು ಹೊರಕ್ಕೆ ತಂದು ಡ್ರಾಯರ್ ಬೀಗ ಮುರಿದಿದ್ದಾರೆ. ಆಗ ಡ್ರಾಯರ್‍ನಲ್ಲಿ ಒಂದು ಫುಲ್ ಮತ್ತು ಎರಡು ಖಾಲಿ ಮದ್ಯದ ಬಾಟಲ್‍ಗಳು ಪತ್ತೆಯಾಗಿದೆ. ಇದನ್ನೂ ಓದಿ: ಈ ಹಿಂದೆ ಹಾವಿನ ಮೊಟ್ಟೆ, ಇದೀಗ ಹಕ್ಕಿ ಗೂಡಿನಿಂದಾಗಿ ರಾ. ಹೆದ್ದಾರಿ ಕೆಲಸ ಸ್ಥಗಿತ!

ಮದ್ಯದ ಬಾಟಲ್ ಪತ್ತೆಯಾಗುತಿದ್ದಂತೆ ಕೊಠಡಿ ಬೀಗಹಾಕೊಂಡು ಗಂಗ ಲಕ್ಷ್ಮಮ್ಮ ಆತ್ಮಹತ್ಯೆ ಮಾಡಿಕೊಳ್ಳುವ ನಾಟಕ ಮಾಡಿದ್ದಾಳೆ. ಬಳಿಕ ಪೊಲೀಸರು ಬಂದು ಮದ್ಯದ ಬಾಟಲನ್ನು ವಶಕ್ಕೆ ಪಡೆದಿದ್ದಾರೆ. ಶಿಕ್ಷಕಿ ಗಂಗಲಕ್ಷ್ಮಮ್ಮಳನ್ನು ಇಲಾಖಾ ವಿಚಾರಣೆಗೆ ಒಳಪಡಿಸಲಾಗಿದೆ. ಒಟ್ಟಾರೆ ಚಿಕ್ಕಸಾರಂಗಿ ಶಾಲೆಯ ಮುಂದೆ ನಡೆದ ಹೈಡ್ರಾಮಾಕ್ಕೆ ಗ್ರಾಮಸ್ಥರು ಸಾಕ್ಷಿಯಾಗಿದ್ದಾರೆ.

Live Tv

Leave a Reply

Your email address will not be published.

Back to top button