Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಸ್ರೇಲ್-ಲೆಬನಾನ್ ಕದನ ವಿರಾಮ 3 ವಾರಗಳವರೆಗೆ ವಿಸ್ತರಣೆ: ಟ್ರಂಪ್‌ ಸಂಧಾನ ಯಶಸ್ವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಸ್ರೇಲ್-ಲೆಬನಾನ್ ಕದನ ವಿರಾಮ 3 ವಾರಗಳವರೆಗೆ ವಿಸ್ತರಣೆ: ಟ್ರಂಪ್‌ ಸಂಧಾನ ಯಶಸ್ವಿ

Latest

ಇಸ್ರೇಲ್-ಲೆಬನಾನ್ ಕದನ ವಿರಾಮ 3 ವಾರಗಳವರೆಗೆ ವಿಸ್ತರಣೆ: ಟ್ರಂಪ್‌ ಸಂಧಾನ ಯಶಸ್ವಿ

Public TV
Last updated: April 24, 2026 8:38 am
Public TV
Share
2 Min Read
Trump announces three week extension of Israel Lebanon ceasefire
SHARE

– ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪಿಸಲು ಇದು ದೊಡ್ಡ ಹೆಜ್ಜೆ
– ಒಪ್ಪಂದವನ್ನು ಐತಿಹಾಸಿಕ ಕ್ಷಣವೆಂದ ಟ್ರಂಪ್‌

ವಾಷಿಂಗ್ಟನ್‌: ಇಸ್ರೇಲ್ (Israel) ಮತ್ತು ಲೆಬನಾನ್(Lebanon) ನಡುವಿನ ಕದನ ವಿರಾಮ (Ceasefire) ಮೂರು ವಾರಗಳವರೆಗೆ (21 ದಿನಗಳು) ವಿಸ್ತರಣೆಯಾಗಿದೆ. ಎರಡೂ ದೇಶಗಳು ಕದನ ವಿರಾಮ ವಿಸ್ತರಿಸಲು ಒಪ್ಪಿಕೊಂಡಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಘೋಷಿಸಿದ್ದಾರೆ.

ಶ್ವೇತಭವನದಲ್ಲಿ ಏ.23 ರಂದು ನಡೆದ ಎರಡನೇ ಸುತ್ತಿನ ಉನ್ನತ ಮಟ್ಟದ ಮಾತುಕತೆಗಳ ನಂತರ ಈ ಮಹತ್ವದ ನಿರ್ಧಾರಕ್ಕೆ ಬರಲಾಗಿದೆ. ಟ್ರಂಪ್ ಅವರ ಮಧ್ಯಸ್ಥಿಕೆಯಲ್ಲಿ ಏಪ್ರಿಲ್ 16 ರಂದು ಮೊದಲ ಬಾರಿಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿತ್ತು.

ಎರಡೂ ರಾಷ್ಟ್ರಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯು ಅತ್ಯಂತ ಯಶಸ್ವಿಯಾಗಿದೆ ಎಂದು ಟ್ರಂಪ್‌ ತಮ್ಮ ‘ಟ್ರೂತ್ ಸೋಶಿಯಲ್’ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಹಿಜ್ಬುಲ್ಲಾ ಉಗ್ರಗಾಮಿ ಸಂಘಟನೆಯಿಂದ ತನ್ನನ್ನು ತಾನು ರಕ್ಷಿಸಿಕೊಳ್ಳಲು ಅಮೆರಿಕವು ಲೆಬನಾನ್‌ಗೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಅವರು ಭರವಸೆ ನೀಡಿದ್ದಾರೆ.

ಎರಡು ದೇಶಗಳ ನಡುವಿನ ಈ ಒಪ್ಪಂದವನ್ನು ಐತಿಹಾಸಿಕ ಕ್ಷಣ ಎಂದು ಟ್ರಂಪ್‌ ಬಣ್ಣಿಸಿದ್ದು, ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪಿಸಲು ಇದು ದೊಡ್ಡ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

President Donald J. Trump provides an update on the ceasefire meeting between Israel and Lebanon. https://t.co/vDaVfrgchB pic.twitter.com/73V41K2Wwl

— The White House (@WhiteHouse) April 23, 2026

ಮುಂಬರುವ ವಾರಗಳಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಲೆಬನಾನ್ ಅಧ್ಯಕ್ಷ ಜೋಸೆಫ್ ಔನ್ ಅವರು ಶ್ವೇತಭವನಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಶಾಶ್ವತ ಶಾಂತಿಗಾಗಿ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

ಶಾಂತಿ ಮಾತುಕತೆಗಳ ನಡುವೆಯೂ ಇರಾನ್ ತನ್ನ ಹಿಜ್ಬುಲ್ಲಾ ಸಂಘಟನೆಗೆ ನೀಡುತ್ತಿರುವ ಧನಸಹಾಯವನ್ನು ನಿಲ್ಲಿಸಬೇಕು ಮತ್ತು ಹಾರ್ಮುಜ್ ಜಲಸಂಧಿಯಲ್ಲಿ ಯಾವುದೇ ಅಡಚಣೆ ಉಂಟುಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

 

 

A very historic meeting went very well Trump announces three week extension of Israel Lebanon ceasefire

ಈ ಕದನ ವಿರಾಮ ಒಪ್ಪಂದವು ಕೇವಲ ದಾಳಿಯನ್ನು ನಿಲ್ಲಿಸುವುದಲ್ಲದೆ ಕೆಲವು ಪ್ರಮುಖ ಷರತ್ತನ್ನು ಒಳಗೊಂಡಿದೆ. ಇಸ್ರೇಲ್ ತನ್ನ ದೇಶದ ಮೇಲೆ ಸಂಭವನೀಯ ಅಥವಾ ಯೋಜಿತ ದಾಳಿಗಳು ನಡೆದರೆ ಅವುಗಳ ವಿರುದ್ಧ ‘ಆತ್ಮರಕ್ಷಣೆಗಾಗಿ’ ಕ್ರಮ ತೆಗೆದುಕೊಳ್ಳುವ ಹಕ್ಕನ್ನು ಕಾಯ್ದಿರಿಸಿಕೊಂಡಿದೆ.

ಲೆಬನಾನ್ ಸರ್ಕಾರವು ತನ್ನ ಭೂಪ್ರದೇಶದಿಂದ ಹಿಜ್ಬುಲ್ಲಾ ಅಥವಾ ಯಾವುದೇ ಇತರ ಸಶಸ್ತ್ರ ಗುಂಪುಗಳು ಇಸ್ರೇಲ್ ಮೇಲೆ ದಾಳಿ ನಡೆಸದಂತೆ ತಡೆಯಲು ಕ್ರಮಕೈಗೊಳ್ಳಬೇಕೆಂದು ಒಪ್ಪಂದ ಹೇಳುತ್ತದೆ.

ಕದನ ವಿರಾಮ ಜಾರಿಯಲ್ಲಿದ್ದರೂ ಸಹ ಗಡಿಯಲ್ಲಿ ಅಲ್ಲಲ್ಲಿ ಸಣ್ಣಪುಟ್ಟ ದಾಳಿಗಳು ಮತ್ತು ಉಲ್ಲಂಘನೆಗಳು ನಡೆಯುತ್ತಿರುವ ಬಗ್ಗೆ ವರದಿಯಾಗಿದೆ. ದಕ್ಷಿಣ ಲೆಬನಾನ್‌ನಲ್ಲಿ ‘ಬಫರ್ ಝೋನ್’ನಲ್ಲಿ ಘರ್ಷಣೆಗಳು ನಡೆಯುತ್ತಿವೆ. ಏಪ್ರಿಲ್ 22 ರಂದು ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಪತ್ರಕರ್ತರೊಬ್ಬರು ಸೇರಿದಂತೆ ಐವರು ಸಾವನ್ನಪ್ಪಿದ್ದರು.

TAGGED:ceasefiredonald trumpIsraelLebanonಇಸ್ರೇಲ್ಕದನ ವಿರಾಮಡೊನಾಲ್ಡ್ ಟ್ರಂಪ್ಲೆಬನಾನ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Bidar Farmers Death
Bidar

ಸಿಡಿಲು ಬಡಿದು ಬೀದರ್‌ನ ಇಬ್ಬರು ಯುವ ರೈತರು ಸಾವು

Public TV
By Public TV
9 minutes ago
Weather 1
Bagalkot

ರಾಜ್ಯದಲ್ಲಿ ಏ.29ರವರೆಗೆ, ಬೆಂಗ್ಳೂರಲ್ಲಿ ಮೇ 5ರವರೆಗೆ ಮಳೆ ಮುನ್ಸೂಚನೆ

Public TV
By Public TV
25 minutes ago
Chikkamagaluru marriage
Chikkamagaluru

ಕಾಫಿನಾಡಲ್ಲೊಂದು ಅಪರೂಪದ ಮದ್ವೆ – ATMನಿಂದ ಲವ್ ಶುರು, ಈಗ ಜಾತಿ ಸಂಕೋಲೆ ಮೀರಿ ಕೈಹಿಡಿದ ಜೋಡಿ

Public TV
By Public TV
54 minutes ago
Chinnaswamy Stadium RCB
Bengaluru City

ಚಿನ್ನಸ್ವಾಮಿಯಲ್ಲಿ ಇಂದು ಬಿಗ್ ಫೈಟ್ – ಆರ್‌ಸಿಬಿ ತವರು ನೆಲದ ಕೊನೆಯ ಲೀಗ್ ಪಂದ್ಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್‌

Public TV
By Public TV
55 minutes ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ನಾಳೆ ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಚಾಲನೆ – ವಿದ್ಯಾರ್ಥಿಗಳೇ, ಪೋಷಕರೇ ಬನ್ನಿ

Public TV
By Public TV
1 hour ago
Minister D. Sudhakars health condition is critical 2
Bengaluru City

ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?