ಬೆಂಗಳೂರು: 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ ಶುಭ ಸಂದರ್ಭದಲ್ಲಿ ಚಿಕ್ಕಪೇಟೆ ವಿಧಾನಸಭಾ ಶಾಸಕರಾದ ಉದಯ ಉದಯ ಗರುಡಾಚಾರ್ ಅವರ ನೇತೃತ್ವದಲ್ಲಿ ಗರುಡಾ ಫೌಂಡೇಷನ್ ಸಂಸ್ಥಾಪಕಿ ಶ್ರೀಮತಿ ಮೇದಿನಿ ಗರುಡಾಚಾರ್ ಅವರ ಸಹಕಾರದಿಂದ ಅಮೃತ ಘಳಿಗೆ ವಾಕಥಾನ್ (ನಡಿಗೆ ಜಾಥ)ಆಯೋಜಿಸಲಾಗಿತ್ತು.
Advertisement
ಶಾಸಕರ ಕಛೇರಿಯಿಂದ ಅಶೋಕ ಸ್ಥಂಭದವರಗೆ ಸಾವಿರಾರು ಜನರು ವಾಕಥಾನ್‍ನಲ್ಲಿ ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಮಾತನಾಡಿದ ಉದಯ ಗರುಡಾಚಾರ್ ಅವರು, ತ್ಯಾಗ, ಬಲಿದಾನದಿಂದ ಬ್ರಿಟಿಷ್‍ರ ಆಳ್ವಿಕೆಯಿಂದ ಮುಕ್ತರಾಗಿ ಭಾರತ ಸ್ವಾತಂತ್ರ್ಯ ಲಭಿಸಿ 75 ವರ್ಷಗಳು ಸಂದಿದೆ. ಈ ಶುಭ ಸಂದರ್ಭದಲ್ಲಿ ಮಾನ್ಯ ಪ್ರಧಾನಿ ನರೇಂದ್ರ ಮೋದಿರವರ ನೇತೃತ್ವದಲ್ಲಿ ಭಾರತಕ್ಕೆ ಉಜ್ವಲ ಭವಿಷ್ಯವಿದೆ. ಹರ್ ಘರ್ ತಿರಂಗಾ ಆಂದೋಲನವಾಗಿ ರೂಪುಗೊಂಡಿದೆ. ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪ್ರತಿಯೊಬ್ಬರ ಮನೆಯ ಮೇಲೆ ಭಾರತೀಯ ತ್ರಿರ್ವಣ ಧ್ವಜ ಹಾರಲಿದೆ.
Advertisement
Advertisement
ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಅಮೃತ ಮಹೋತ್ಸವ ಅಂಗವಾಗಿ ವಾಕಥಾನ್ ಮತ್ತು ಉಚಿತವಾಗಿ ತ್ರಿರ್ವಣ ಧ್ವಜ ವಿತರಣೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಸಂದೇಶಗಳನ್ನು ಮನೆ, ಮನೆಗೆ ತಲುಪಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ: ಗುಂಡನನ್ನು ಹುಡುಕಿಕೊಟ್ಟವರಿಗೆ 30 ಸಾವಿರ ರೂ. ಬಹುಮಾನ – ಮಗನಂತೆ ಸಾಕಿದ್ದ ಶ್ವಾನಕ್ಕಾಗಿ ಮಹಿಳೆ ಕಣ್ಣೀರು
Advertisement
ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ತಮ್ಮ ಜೀವವನ್ನು ತ್ಯಾಗ, ಬಲಿದಾನ ಮಾಡಿದ ಮಹನೀಯರುಗಳು ಜೀವನ ಚರಿತ್ರೆಯನ್ನು ಇಂದಿನ ಯುವ ಸಮೂಹ ಅರಿತುಕೊಳ್ಳಬೇಕು. ಅವರ ಸಂದೇಶಗಳನ್ನು ಜೀವನದಲ್ಲಿ ಅಳವಡಿಕೊಂಡು ಸಾಗಬೇಕು. ಭಾರತ ಸಮೃದ್ಧ, ಸದೃಢ ಯುವ ಜನಾಂಗದ ಕೊಡುಗೆ ನೀಡಬೇಕು ಎಂದು ಹೇಳಿದರು. ಇದನ್ನೂ ಓದಿ: ಫ್ಲ್ಯಾಶ್‌ಲೈಟ್‌ನಲ್ಲಿ ಇಸಿಜಿ ಟೆಸ್ಟ್ ಮಾಡಿದ ಸರ್ಕಾರಿ ಆಸ್ಪತ್ರೆ ವೈದ್ಯರು