ಯಾವುದೇ ಕಾರಣಕ್ಕೂ ಪಲಾಯನಗೈಯುವುದಿಲ್ಲ: ಯತ್ನಾಳ್

Public TV
1 Min Read
Basangouda Patil Yatnal 1

ಬೆಂಗಳೂರು: ಯಾವುದೇ ಕಾಋನಕ್ಕೂ ನಾನು ಪಲಾಯನ ಮಾಡಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಅವರು ಸ್ಪಷ್ಟಪಡಿಸಿದ್ದಾರೆ.

ಸಭೆಗೆ ಗೈರಾದ ಬೆನ್ನಲ್ಲೇ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಳ್ಳುವ ಮೂಲಕ ಪಲಾಯನ ಮಾಡುವ ಪ್ರಶ್ನೆಯೇ ಇಲ್ಲ ಎಂದು ಶಾಸಕರು ಗುಡುಗಿದ್ದಾರೆ.

ಎಂಥದ್ದೇ ಪರಿಸ್ಥಿತಿ ಬಂದರೂ ನಾನು ಹೆದರಲ್ಲ. ಯಾವ ಕಾರಣಕ್ಕೂ ಪಲಾಯನ ಮಾಡಲ್ಲ. ಎಂದಿಗೂ ನನ್ನ ಶತ್ರುಗಳಿಗೆ ತಲೆಬಾಗಲ್ಲ ಎಂದು ಸ್ಪಷ್ಟವಾಗಿ ಸಂದೇಶವೊಂದನ್ನು ಶಾಸಕರು ರವಾನಿಸಿದ್ದಾರೆ. ನ ದೈನಂ, ನ ಪಲಾಯನಂ. ಒಬ್ಬ ಯೋಧ ಯಾವುದನ್ನೂ ದೂರಲು ಅಥವಾ ವಿಷಾದಿಸಲು ಸಾಧ್ಯವಿಲ್ಲ. ಅವನ ಜೀವನವು ಅಂತ್ಯವಿಲ್ಲದ ಸವಾಲು. ಮತ್ತು ಸವಾಲುಗಳು ಬಹುಶಃ ಒಳ್ಳೆಯದು ಅಥವಾ ಕೆಟ್ಟದ್ದಾಗಿರಲು ಸಾಧ್ಯವಿಲ್ಲ. ಸವಾಲುಗಳು ಅಂದ್ರೆ ಸರಳವಾಗಿ ಸವಾಲುಗಳೇ ಎಂದು ಹೇಳಿದ್ದಾರೆ.

ಬಿಜೆಪಿ ಶಾಸಕಾಂಗ ಸಭೆಗೂ ಮುನ್ನ ಸಭೆ ಬಹಿಷ್ಕರಿಸಿ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಹೊರ ನಡೆದಿದ್ದಾರೆ. ಇದಕ್ಕೂ ಮುನ್ನ ಹೈಕಮಾಂಡ್ ಸಂದೇಶ ಹೊತ್ತು ತಂದ ವೀಕ್ಷಕರ ಎದುರೇ ಶಾಸಕ ಯತ್ನಾಳ್ ಮೌನ ಮುರಿದಿದ್ದರು. ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕಕ್ಕೆ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಶಾಸಕಾಂಗ ಸಭೆಗೂ ಮುನ್ನ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ- ಸಭೆ ಬಹಿಷ್ಕರಿಸಿದ ಇಬ್ಬರು ಶಾಸಕರು

ಬಿಜೆಪಿ ಒಂದೇ ಕುಟುಂಬಕ್ಕೆ ಸೀಮಿತವಾಗಬಾರದು. ಬ್ಲಾಕ್‍ಮೇಲ್ ತಂತ್ರಗಳಿಗೆ ಹೈಕಮಾಂಡ್ ಮಣಿಯಬಾರದು. ಕೆಲವೇ ಚೇಲಗಳ ಮಾತು ಕೇಳಿ ಕೇಂದ್ರ ನಾಯಕರು ತೀರ್ಮಾನ ಮಾಡಬಾರದು. ನಾನು ಯಾವುದೇ ಕಾರಣಕ್ಕೂ ಕಾಂಪ್ರಮೈಸ್ ಆಗಲ್ಲ. ನನ್ನ ಖರೀದಿ ಮಾಡಲಾಗಲ್ಲ.. ಪ್ರತಿಪಕ್ಷದ ನಾಯಕ ಸ್ಥಾನ ಉತ್ತರ ಕರ್ನಾಟಕದವರಿಗೆ ಕೊಡಬೇಕು. ಉತ್ತರ ಕರ್ನಾಟಕಕ್ಕೆ ವಿಪಕ್ಷ ಸ್ಥಾನ ನೀಡದಿದ್ದರೆ ಜನ ತೀರ್ಮಾನಿಸುತ್ತಾರೆ ಎಂದು ಗುಡುಗಿದ್ದರು.

Share This Article