ಕಾರವಾರ: ಉತ್ತರಾಖಂಡದಲ್ಲಿ (Uttarakhand) ಆದ ಹವಾಮಾನ ವೈಪರೀತ್ಯ ದಿಂದ ಹಿಮಪಾತವಾಗಿ ನಾಪತ್ತೆಯಾದ ಚಾರಣಿಗರಲ್ಲಿ ಶಿರಸಿ ತಾಲೂಕಿನ ಜಾಗನಹಳ್ಳಿಯ ಯುವತಿ ಪದ್ಮಿನಿ ಸಹ ಇದ್ದು, ಅವರು ಮೃತಪಟ್ಟಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ.
ಟ್ರೆಕ್ಕಿಂಗ್ ಗೈಡ್‌ಗಳಾಗಿ ಉತ್ತರ ಕಾಶಿಯ (Uttara kashi) ಮೂವರು ನಿವಾಸಿಗಳ ಜೊತೆ ಬೆಂಗಳೂರಿನಿಂದ 18 ಮಂದಿ ಹಾಗೂ ಪುಣೆಯಿಂದ ಒಬ್ಬರ ಜೊತೆ ತೆರಳಿದ್ದರು. ಇವರೊಂದಿಗೆ ಜಾಗನಹಳ್ಳಿ ಮೂಲದ ಬೆಂಗಳೂರು ನಿವಾಸಿ, ಗೂಗಲ್ ಕಂಪನಿಯಲ್ಲಿ ನೌಕರಿ ಮಾಡುತ್ತಿದ್ದ ಪದ್ಮಿನಿ ಹೆಗಡೆ (35) ಅವರು ಒಬ್ಬರಾಗಿದ್ದರು.
ಪದ್ಮಿನಿ ಹೆಗಡೆ ಅವರು ಕೆಲವು ವರ್ಷಗಳಿಂದ ಚಾರಣದಲ್ಲಿ (Trekking) ಆಸಕ್ತಿ ಹೊಂದಿದ್ದರು. ಮೇ 29ರಿಂದ ಜೂನ್ 7ರವರೆಗೆ ಭಟವಾಡಿ ಮಲ್ಲಾ – ಸಿಲ್ಲಾ ಕುಶಕಲ್ಯಾಣ ಸಹಸ್ರತಾಲ್ ಟ್ರೆಕ್ಕಿಂಗ್‌ಗೆ ಅನುಮತಿ ಪಡೆದ ತಂಡದೊಂದಿಗೆ ಪದ್ಮಿನಿ ಅವರು ತೆರಳಿದ್ದರು. ಇದನ್ನೂ ಓದಿ: ಉತ್ತರಾಖಂಡದಲ್ಲಿ ಸಾವನ್ನಪ್ಪಿದ 9 ಚಾರಣಿಗರ ಮೃತದೇಹಗಳು ಚಾರ್ಟರ್ ಫ್ಲೈಟ್ ಮೂಲಕ ಬೆಂಗಳೂರಿಗೆ: ಕೃಷ್ಣಬೈರೇಗೌಡ
ಜೂ. 4ರಂದು ಮಧ್ಯಾಹ್ನದ ಸಮಯಕ್ಕೆ ಹವಾಮಾನ ಸರಿಯಾಗಿಲ್ಲ ಎನ್ನುವುದಾಗಿ ಪದ್ಮಿನಿ ಅವರು ತಮ್ಮ ತಾಯಿಗೆ ಮೆಸೇಜ್ ಹಾಕಿದ್ದರು. ಅವರು ನಾಪತ್ತೆಯಾಗಿದ್ದಾರೆ ಎನ್ನುವ ಮಾಹಿತಿ ನಮಗಿದೆ. ಅವರಿಗೆ ಯಾವುದೇ ಅವಘಡ ಆಗಿದೆ ಎನ್ನುವುದಾಗಿ ನಮಗೆ ಅಧಿಕೃತವಾಗಿ ಮಾಹಿತಿ ಬಂದಿಲ್ಲ ಎನ್ನುವುದಾಗಿ ಪದ್ಮಿನಿ ಅವರ ಕುಟುಂಬದವರು ನಿನ್ನೆ ತಿಳಿಸಿದ್ದರು.
ಪದ್ಮಿನಿ ಅವರ ತಂದೆ ಶ್ರೀಪತಿ ಹೆಗಡೆ ಅವರು ನಿಧನರಾಗಿದ್ದಾರೆ. ತಾಯಿ ಶೈಲಾ ಹೆಗಡೆ ಅವರು ಮುಂಬೈನಲ್ಲಿ ತಮ್ಮ ಮೊದಲ ಮಗಳ ಜತೆ ವಾಸ ಮಾಡುತ್ತಿದ್ದಾರೆ. ಇವರು ಕೂಡ ತಾಯಿ ಹಾಗೂ ಅಕ್ಕನ ಜತೆ ವಾಸವಾಗಿದ್ದರು. ಸದ್ಯ ಬೆಂಗಳೂರಿನಲ್ಲಿ ನೌಕರಿ ಮಾಡುತ್ತಿದ್ದರು ಎನ್ನುವುದಾಗಿ ತಿಳಿದು ಬಂದಿದ್ದು ಇಂದು ಮೃತರಾಗುರುವ ಮಾಹಿತಿಯನ್ನು ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿಗಳು ಖಚಿತ ಪಡಿಸಿದ್ದು ಪಸ್ಮಿನಿಯವರ ಮೃತ ದೇಹ ಪತ್ತೆಯಾಗಬೇಕಿದೆ.