ಚಿತ್ರದುರ್ಗ: ಗೃಹಿಣಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಗರಂಗೆರೆ ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯನ್ನ ಆಶಾ (23) ಗುರುತಿಸಲಾಗಿದೆ. ಆಶಾ ಅವರಿಗೆ ಕಳೆದ ಆರು ತಿಂಗಳ ಹಿಂದೆಯಷ್ಟೇ ನಾಗರಾಜ್ ಎಂಬವರೊಂದಿಗೆ ವಿವಾಹವಾಗಿತ್ತು. ಇದೀಗ ಆಶಾ ನೇಣಿಗೆ ಶರಣಾಗಿರುವುದು ಅನುಮಾನಕ್ಕೆ ಕಾರಣವಾಗಿದೆ.
ನೇಣು ಬಿಗಿದಿರೋ ಸ್ಥಿತಿ ಕೂಡ ಅನುಮಾನಸ್ಪದವಾಗಿದ್ದೂ, ಪತಿ, ಅತ್ತೆ ಹಾಗೂ ಮಾವ ಸೇರಿ ಕೊಲೆಗೈದು ನೇಣು ಹಾಕಿರಬಹುದೆಂಬ ಶಂಕೆ ಕೂಡ ವ್ಯಕ್ತವಾಗಿದೆ.
ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಚಳ್ಳಕೆರೆ ತಹಶಿಲ್ದಾರ್ ಕಾಂತರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.