ChitradurgaCrimeDistrictsKarnatakaLatestMain Post

ಇಬ್ಬರು ಮಕ್ಕಳೊಂದಿಗೆ ಚೆಕ್‍ಡ್ಯಾಂಗೆ ಹಾರಿ ಮಹಿಳೆ ಆತ್ಮಹತ್ಯೆ

ಚಿತ್ರದುರ್ಗ: ಮದ್ಯಪಾನ (Alcohol) ಕ್ಕೆ ದಾಸನಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದ ಗಂಡನ ಟಾರ್ಚರ್ ತಾಳಲಾರದೆ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಚೆಕ್ ಡ್ಯಾಂ (Check Dam) ಗೆ ಹಾರಿ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಮಳಲಿ ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿಜಾನಕಲ್ ಲಂಬಾಣಿ ಹಟ್ಟಿಯ ಅರ್ಪಿತಾ(28), ಮಗಳು ಮಾನಸ(6), ಮಗ ಮದನ್(4) ಮೃತ ದುರ್ದೈವಿಗಳು. ಕಳೆದ 8ವರ್ಷದ ಹಿಂದೆ ಹೊಸದುರ್ಗ ತಾಲೂಕಿನ ಜಾನಕಲ್ ಲಂಬಾಣಿಹಟ್ಟಿಯ ಅರ್ಪಿತಾಳನ್ನು ಕೊಂಡಜ್ಜಿ ಲಂಬಾಣಿಹಟ್ಟಿಯ ಮಂಜಾನಾಯ್ಕ್ ಮದುವೆಯಾಗಿದ್ದು, ಪತ್ನಿ ಮೇಲೆ ಅನುಮಾನ ಪಡುತ್ತಿದ್ದನು. ಇದನ್ನೂ ಓದಿ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು – ಕಣ್ಣುಗಳನ್ನು ದಾನ ಮಾಡಿದ ಪೋಷಕರು

ಅಲ್ಲದೇ ನಿತ್ಯ ಮದ್ಯಪಾನ ಮಾಡಿ ಮನೆಗೆ ಬಂದು ಟಾರ್ಚರ್ (Torcher) ನೀಡುತ್ತಾ ಹಲ್ಲೆ ನಡೆಸುತ್ತಿದ್ದನಂತೆ. ಈ ಕಿರುಕುಳದಿಂದ ಮನನೊಂದ ಅರ್ಪಿತಾ ತನ್ನ ಇಬ್ಬರು ಮಕ್ಕಳೊಂದಿಗೆ ಚೆಕ್ ಡ್ಯಾಂಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಅರ್ಪಿತಾ, ಮೊಬೈಲ್ ವೀಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸೆಲ್ಫಿ ವೀಡಿಯೋ ವೇಳೆ ಅಪ್ಪ ಎಂದು ಕೂಗಿರುವ ಪುಟ್ಟ ಬಾಲಕ ಮದನ್‍ನ ಮನಕಲಕುವ ಸೆಲ್ಫಿ ವೀಡಿಯೋ ವೈರಲ್ ಆಗಿದೆ.

ಈ ಸಂಬಂಧ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Live Tv

Leave a Reply

Your email address will not be published. Required fields are marked *

Back to top button