ಮಂಡ್ಯ: ಮಕ್ಕಳ ಅನಾರೋಗ್ಯದಿಂದ ಬೇಸತ್ತ ತಾಯಿಯೊಬ್ಬಳು ತನ್ನ ಎರಡು ಗಂಡು ಮಕ್ಕಳನ್ನು ಹತ್ಯೆಗೈದು ನಂತರ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಾಗಮಂಗಲ ತಾಲೂಕಿನ ಶಿವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶಿವನಹಳ್ಳಿ ಗ್ರಾಮದ ಪುಟ್ಟಮ್ಮ (25) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಪುಟ್ಟಮ್ಮ ತನ್ನ ಇಬ್ಬರು ಮಕ್ಕಳಾದ ಸಂತೋಷ್ (2) ಹಾಗೂ ಸಾತ್ವಿಕ್ (7) ಇಬ್ಬರನ್ನು ನೀರಿನ ಡ್ರಮ್‍ನಲ್ಲಿ ಮುಳುಗಿಸಿ ಸಾಯಿಸಿದ್ದಾಳೆ.
ಮೃತ ಪುಟ್ಟಮ್ಮ ಕುಟುಂಬಸ್ಥರ ಹಾಗೂ ಗ್ರಾಮಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಈ ಕುರಿತು ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ಮಾಹಿತಿ ಪಡೆದು ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವ ಚಲುವರಾಯಸ್ವಾಮಿ ಅವರು, ಮೃತ ಪುಟ್ಟಮ್ಮ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವರು, ಅನಾರೋಗ್ಯಕ್ಕೆ ತುತ್ತಾದರೆ ಹಳ್ಳಿ ಜನರಲ್ಲಿ ಆರ್ಥಿಕ ಸಮಸ್ಯೆಯ ಭಯ ಆರಂಭವಾಗಿರುತ್ತದೆ. ಆದರೆ ಅವರು ಸರ್ಕಾರದ ಆರೋಗ್ಯ ಯೋಜನೆಗಳ ಬಗ್ಗೆ ಮಾಹಿತಿ ಪಡೆದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುಲಿಲ್ಲ ಎಂದು ತಿಳಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv