ಮಡಿಕೇರಿ: ಕಾಡಾನೆಯೊಂದರ ದಾಳಿಗೆ ಸಿಲುಕಿ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಚನ್ನಂಗೊಲ್ಲಿ ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಚನ್ನಂಗೊಲ್ಲಿ ಗ್ರಾಮದ ಪೈಸಾರಿ ನಿವಾಸಿ ಜಾನಕಿ (52) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಇಂದು ರಾತ್ರಿ 11:30ಕ್ಕೆ ಪರಸ್ಪರ ಸುಂಕ ಘೋಷಣೆ; ಕೊನೇ ಕ್ಷಣದಲ್ಲಿ ಕುತೂಹಲ ಹೆಚ್ಚಿಸಿದ ಟ್ರಂಪ್-ಮೋದಿ ಭೇಟಿ
ಕೊಡಗು ಜಿಲ್ಲೆಯಲ್ಲಿ ಆನೆ ಮಾನವ ಸಂಘರ್ಷಕ್ಕೆ ಕೊನೆಯೇ ಇಲ್ಲದಂತೆ ಅಗಿದೆ. ನಿತ್ಯ ಒಂದಲ್ಲ ಒಂದು ರೀತಿಯಲ್ಲಿ ವನ್ಯಜೀವಿಗಳ ಹಾವಳಿಯಿಂದ ತತ್ತರಿಸಿರುವ ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಾಡಾನೆಗಳ ಸಮಸ್ಯೆ ದಿನ ಕಳೆದಂತೆ ಹೆಚ್ಚಾಗುತ್ತಿದೆ. ಈ ನಡುವೆ ದಕ್ಷಿಣ ಕೊಡಗಿನಲ್ಲಿ ಕಾಡಾನೆಗಳ ಹಾವಳಿ ತಾರಕಕ್ಕೇರಿದೆ.
ಚನ್ನಂಗೊಲ್ಲಿ ಗ್ರಾಮದ ಬಳಿಯ ಕಾಫಿ ತೋಟವೊಂದರಲ್ಲಿ ಕಾರ್ಯನಿರ್ವಹಿಸಿ ಸಂಜೆ ಮನೆಗೆ ಮರಳುವ ಸಂದರ್ಭದಲ್ಲಿ ಮಹಿಳೆ ಮೇಳೆ ಕಾಡಾನೆ ದಿಢೀರ್ ದಾಳಿ ಮಾಡಿದೆ. ಗಂಭೀರ ಸ್ವರೂಪದಲ್ಲಿ ಗಾಯಗೊಂಡ ಜಾನಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕಾಫಿ ತೋಟಗಳಲ್ಲಿ ನೆಲೆ ನಿಂತಿರುವ ಕಾಡಾನೆಗಳನ್ನು ತಕ್ಷಣ ಅರಣ್ಯಕ್ಕೆ ಓಡಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಇನ್ನೂ ಈ ನಡುವೆ ಮೃತಪಟ್ಟ ಜಾನಕಿ ಮೃತದೇಹವನ್ನು ನೋಡಲು ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಸಂಕೇತ್ ಪೂವಯ್ಯ ಹಾಗೂ ವಿರಾಜಪೇಟೆ ಶಾಸನ ಎಎಸ್ ಪೊನ್ನಣ್ಣ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ. ಅಲ್ಲದೇ ಅರಣ್ಯ ಇಲಾಖೆಯ ಆದಿಕಾರಿಗಳಿಗೆ ತೋಟದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಮೀಸಲು ಅರಣ್ಯ ಪ್ರದೇಶಕ್ಕೆ ಓಡಿಸುವ ಕಾರ್ಯಚರಣೆ ಮಾಡುವಂತೆ ಸೂಚನೆ ನೀಡಿದ್ದಾರೆ.ಇದನ್ನೂ ಓದಿ: ಫೆ.14ರಂದು ಬಿಡುಗಡೆಗೊಳ್ಳಲಿದೆ `ರಾಜು ಜೇಮ್ಸ್ ಬಾಂಡ್’ ಚಿತ್ರ!