ಮಂಡ್ಯ: ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದ ಎಸ್ಪಿ ಕಚೇರಿಯಲ್ಲಿ ನಡೆದಿದೆ.
ಮಂಡ್ಯ ತಾಲೂಕು ಹೊಳಲು ಗ್ರಾಮದ ಸುಕನ್ಯಾ(35) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಎಸ್‍ಎಸ್‍ಎಲ್‍ಸಿ ಓದುತ್ತಿದ್ದ ಸುಕನ್ಯಾ ಅವರ ಪುತ್ರಿ ಜೂನ್ 22ರಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಳು. ಆದರೆ ಈ ಕುರಿತು ಪೊಲೀಸರು ಪ್ರಕರಣ ದಾಖಲ ಮಾಡಿಕೊಂಡಿರಲಿಲ್ಲ. ಇದರಿಂದ ಮನನೊಂದ ಸುಕನ್ಯಾ ಅವರು ಮಗಳ ಸಾವಿಗೆ ಸೂಕ್ತ ನ್ಯಾಯ ದೊರಕಿಸಿಕೊಡುವಂತೆ ಇಂದು ಎಸ್ಪಿ ಕಚೇರಿಗೆ ಬಂದಿದ್ದರು.
ಎಸ್ಪಿ ಕಚೇರಿ ಮುಂದೆ ನಿಂತಿದ್ದ ಸುಕನ್ಯಾ ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಯತ್ನಸಿದ್ದರು. ತಕ್ಷಣವೇ ಜಾಗೃತಗೊಂಡ ಪೊಲೀಸರು ಬೆಂಕಿ ಹತ್ತದಂತೆ ಎಚ್ಚರಿಕೆ ವಹಿಸಿ, ನಂತರ ಸುಕನ್ಯಾ ಅವರನ್ನು ವಶಕ್ಕೆ ಪಡೆದಿದ್ದಾರೆ.