ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಲಕ್ಷ್ಮೀ ಮೃತ ದುರ್ದೈವಿ. ಮನೆಯಲ್ಲಿ ಫ್ಯಾನಿಗೆ ನೇಣು ಹಾಕಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಪತಿ ನಾಗೇಶ್ ಮತ್ತು ಅತ್ತೆ-ಮಾವ ಸೇರಿ ಕೊಲೆ ಮಾಡಿದ್ದಾರೆ ಎಂದು ಲಕ್ಷ್ಮೀ ಸಹೋದರಿ ಆರೋಪಸಿದ್ದಾರೆ. ಭಾನುವಾರ ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹಿಳೆಗೆ ಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಆರೋಪ ಕೇಳಿಬರುತ್ತಿದೆ.
Advertisement
ಲಕ್ಷ್ಮೀ ಕೆಲವು ತಿಂಗಳ ಹಿಂದೆ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪತಿಯ ವಿರುದ್ಧ ದೂರು ಸಲ್ಲಿಸಿದ್ದರು. ಈ ಘಟನಾ ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡ ನೀಡಿ ಪರಿಶೀಲನೆ ನೆಡೆಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv