ಆನೇಕಲ್‌| ಪತ್ನಿ ದೇಹ ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿದ ಪಾಪಿ ಪತಿ

Public TV
1 Min Read
anekal murder

ಬೆಂಗಳೂರು ಗ್ರಾಮಾಂತರ: ಪತ್ನಿ ದೇಹ ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿ ಪತಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಹುಳಿಮಾವು ಸಮೀಪದ ದೊಡ್ಡ ಕಮ್ಮನಹಳ್ಳಿಯಲ್ಲಿ ನಡೆದಿದೆ.

ಮಹಾರಾಷ್ಟ್ರ ಮೂಲದ ರಾಕೇಶ್ ಕೃತ್ಯ ಎಸಗಿರುವ ಆರೋಪಿ. ಗೌರಿ ಅನಿಲ್ ಸಾಂಬೆಕರ್ ಮೃತ ಪತ್ನಿ. ಮಹಾರಾಷ್ಟ್ರದಲ್ಲಿರುವ ಪತ್ನಿ ಪೋಷಕರಿಗೆ ಪೋನ್ ಕರೆ ಮಾಡಿ ಆರೋಪಿ ರಾಕೇಶ್‌ ಸಾವಿನ ಸುದ್ದಿ ತಿಳಿಸಿದ್ದಾನೆ.

ಪ್ರಕರಣ ಸಂಬಂಧ ಮಹಾರಾಷ್ಟ್ರ ಪೊಲೀಸರಿಂದ ಹುಳಿಮಾವು ಪೋಲಿಸರಿಗೆ ಮಾಹಿತಿ ಸಿಕ್ಕಿದೆ. ಮಾಹಿತಿ ಆಧರಿಸಿ ಹುಳಿಮಾವು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಡಿಸಿಪಿ ಸಾರಾ ಫಾತಿಮಾ ಭೇಟಿ ನೀಡಿದ್ದಾರೆ.

ಖಾಸಗಿ ಕಂಪನಿಯಲ್ಲಿ ದಂಪತಿ ಕೆಲಸ ಮಾಡಿಕೊಂಡಿದ್ದರು. ವರ್ಕ್ ಫ್ರಂ ಹೋಂ ಹಿನ್ನೆಲೆ ಮನೆಯಿಂದಲೇ ಕೆಲಸ ಮಾಡುತ್ತಿದ್ದರು. ಕಳೆದ ಒಂದು ವರ್ಷದ ಹಿಂದೆ ದೊಡ್ಡಕಮ್ಮನಹಳ್ಳಿ ಮನೆಗೆ ಬಂದು ವಾಸವಿದ್ದರು. ಪತ್ನಿಯನ್ನು ಕೊಲೆ ಮಾಡಿ ನಂತರ ಸ್ನೇಹಿತನಿಗೆ ಫೋನ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿ ಹೇಳಿದ್ದ.

ಪತಿ ರಾಕೇಶ್ ಇನ್ನೂ ಪೊಲೀಸರಿಗೆ ಸಿಕ್ಕಿಲ್ಲ. ಹುಳಿಮಾವು ಪೊಲೀಸರಿಂದ ರಾಕೇಶ್‌ಗಾಗಿ ಹುಡುಕಾಟ ನಡೆದಿದೆ.

Share This Article