ಹುಬ್ಬಳ್ಳಿ: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆಯಾಗಿರುವ ಘಟನೆ ಧಾರವಾಡ (Dharwad) ಜಿಲ್ಲೆಯ ಕಲಘಟಗಿ ತಾಲೂಕಿನ ಬೋಗೆನಾಗರಕೊಪ್ಪದಲ್ಲಿ ನಡೆದಿದೆ.
ಗೃಹಿಣಿ ಸುಮಂಗಲಾ ತಿಪ್ಪಣ್ಣವರ್ ಮೃತಪಟ್ಟವರು. ಗಂಡನ ಮನೆಯಲ್ಲಿ ಮಹಿಳೆ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಲಾಗಿದೆ ಎಂದು ಪತಿ ಕುಟುಂಬಸ್ಥರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಟರ್ಪಾಲ್ ಶೆಡ್‍ನಲ್ಲಿ ವಾಸಿಸುವ ಒಂಟಿ ಮಹಿಳೆಗೆ ನೋಟಿಸ್
ಕಳೆದ 5 ವರ್ಷಗಳ ಹಿಂದೆ ಪ್ರವೀಣ್ ತಿಪ್ಪಣ್ಣವರ್ ಎಂಬವರಿಗೆ ಸುಮಂಗಲಾ ಕೊಟ್ಟು ಮದುವೆ ಮಾಡಲಾಗಿತ್ತು. ಮದುವೆ ಮಾಡಿಕೊಟ್ಟರೂ ಗಂಡನ ಮನೆಯವರು ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರೆಂದು ಆರೋಪಿಸಲಾಗಿತ್ತು.
ಸುಮಂಗಲಾ ಪತಿ ಪ್ರವೀಣ್ ಹಾಗೂ ಕುಟುಂಬಸ್ಥರು ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದಾರೆ. ಸುಮಂಗಲಾ ಸಾವಿನ ಬೆನ್ನಲ್ಲೇ ಪತಿ ಪ್ರವೀಣ್ ಹಾಗೂ ಕುಟುಂಬಸ್ಥರು ಪರಾರಿಯಾಗಿದ್ದಾರೆ. ಈ ಕುರಿತು ಪತಿ ಪ್ರವೀಣ್ ಹಾಗೂ ಆತನ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಮೂರು ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ ಶಂಕೆ – ಪತಿ ನಾಪತ್ತೆ
ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
Web Stories