ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ ಹಳ್ಳಕ್ಕೆ ಉರುಳಿದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು ಐವರು ಗಂಭೀರ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.
ಬೇಲೂರು-ಮೂಡಿಗೆರೆ ತಾಲೂಕಿನ ಗಡಿ ಗ್ರಾಮ ಚೀಕನಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಬೆಂಗಳೂರಿನ (Bengaluru) ಯಲಹಂಕ ನಿವಾಸಿ ಸುರೇಖಾ (45) ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ವಿಷವಾಗುತ್ತಿದೆಯಾ ಉಸಿರಾಡುವ ಗಾಳಿ? – ಪರಿಶೀಲನೆಗೆ 1,119 ಅಧಿಕಾರಿಗಳ 517 ತಂಡ ರಚನೆ
Advertisement
Advertisement
ಕಳೆದ ರಾತ್ರಿ ಬೆಂಗಳೂರಿನಿಂದ ಹೊರಟಿದ್ದ ಬಸ್ (Bus) ಶನಿವಾರ (ನ.4) ಬೆಳಗ್ಗಿನ ಜಾವ 4.45ಕ್ಕೆ ಚೀಕನಹಳ್ಳಿ ಬಳಿ ಬರುತ್ತಿದ್ದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದಿದೆ. ಈ ಬಸ್ಸು ಬೆಂಗಳೂರಿನಿಂದ ಧರ್ಮಸ್ಥಳ (Dharmastala), ಸುಬ್ರಹ್ಮಣ್ಯ, ಹೊರನಾಡು, ಶೃಂಗೇರಿಗೆ ಪ್ರವಾಸಕ್ಕೆ ಹೊರಟಿತ್ತು ಎನ್ನಲಾಗಿದೆ. ಇದನ್ನೂ ಓದಿ: ಜನವಸತಿ ಪ್ರದೇಶದಲ್ಲೇ ಅಕ್ರಮ ಗಣಿಗಾರಿಕೆ- ಕಟ್ಟಡಗಳು ಬಿರುಕು, ಬೆಚ್ಚಿದ ಅಂಗನವಾಡಿ ಮಕ್ಕಳು
Advertisement
Advertisement
ಬಸ್ಸಿನಲ್ಲಿ ರಾಜನಗುಂಟೆ ಹಾಗೂ ಕೆ.ಆರ್.ಪುರಂನ 48ಕ್ಕೂ ಹೆಚ್ಚು ಜನ ಪ್ರಯಾಣಿಕರಿದ್ದು, ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನ ಹಾಸನ ಜಿಲ್ಲೆಯ ಬೇಲೂರು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಸ್ಕೆಬೈಲು-ಚೀಕನಹಳ್ಳಿ ಈ ತಿರುವಿನಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸಿವೆ. ಕಳೆದ 10 ತಿಂಗಳಲ್ಲಿ 70ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ಚೀಕನಹಳ್ಳಿಯ ಕ್ರಾಸ್‍ಗೆ ತಡೆಗೋಡೆ ನಿರ್ಮಿಸಿ ಎಂದು ಸ್ಥಳಿಯರು ಸರ್ಕಾರಕ್ಕೆ ಮನವಿ ಮಾಡಿದ್ದರೂ ಸರ್ಕಾರ ಕಿವಿಗೊಡುತ್ತಿಲ್ಲ. ಈ ತಿರುವಿನಲ್ಲಿ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿದ್ದು ಅಮಾಯಕ ಜೀವಗಳು ಪ್ರಾಣ ಕಳೆದುಕೊಳ್ಳುತ್ತಿವೆ ಎಂದು ಸ್ಥಳಿಯರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: Nepal Earthquake: ಭೀಕರ ಭೂಕಂಪನಕ್ಕೆ ಬೆಚ್ಚಿಬಿದ್ದ ನೇಪಾಳ- 70 ಮಂದಿ ದುರ್ಮರಣ
Web Stories