ಬೈಕ್‌ಗೆ ಬೊಲೆರೋ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ಮಹಿಳೆ ಸಾವು

Public TV
1 Min Read
Car Accident

ಚಿಕ್ಕಬಳ್ಳಾಪುರ: ಬೊಲೆರೋ (Bolero) ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೆಂಚಾರ್ಲಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ದಂಡುಪಾಳ್ಯ ಗೇಟ್ ಬಳಿ ಸಂಭವಿಸಿದೆ.

Car Accident 2

ಬೊಲೆರೋ ವಾಹನದಲ್ಲಿ ಮದನಪಲ್ಲಿ ಕಡೆಯಿಂದ ಆಂಧ್ರ ಪ್ರದೇಶದ ಕದರಿ ಮೂಲದವರು ವಿಜಯಪುರ (Vijayapura) ಕಡೆಗೆ ಹೋಗುತ್ತಿದ್ದು, ದ್ವಿಚಕ್ರ ವಾಹನದಲ್ಲಿ ಆಯಾಜ್(33ವರ್ಷ) ಹಾಗೂ ತನ್ನ ಹೆಂಡತಿ ತರನ್ನುಂ (22ವರ್ಷ) ಇಬ್ಬರು ಬೇತಮಂಗಲ ಕಡೆ ಹೋಗುತ್ತಿದ್ದು, ಬೊಲೆರೋ ವಾಹನ ಚಾಲಕ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹೆಂಡತಿ ತರನ್ನುಂ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇದನ್ನೂ ಓದಿ: Chikkamagaluru | 17 ಕುಟುಂಬಗಳಿಗೆ ಗುಡ್ಡ ಕುಸಿತದ ಆತಂಕ – ಸ್ಥಳಾಂತರಕ್ಕೆ ಡೆಡ್‌ಲೈನ್ ಕೊಟ್ಟ ಗ್ರಾಮಸ್ಥರು

Car Accident 3

ಇನ್ನೂ ಗಂಡ ಆಯಾಜ್‌ಗೆ ಗಂಭೀರ ಗಾಯಗಳಾಗಿದ್ದು ಬೊಲೆರೋ ವಾಹನದಲ್ಲಿ ಇದ್ದ ಕದರಿ ಮೂಲದ ಅದಲ್ಲಪ್ಪ ಬೀದಿಯ ಫಕ್ರುದ್ದೀನ್, ಆಜದ್, ಜಬೀನ, ಹಮೀದ್, ಶೋಯಿಬ್, ಸಲೀಮಾ, ಶಕೀರಾ, ಶಬ್ನಂಗೆ ಸಣ್ಣಪುಟ್ಟ ಗಾಯಗಳಾಗಿದ್ದು ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಗಂಭೀರ ಗಾಯಗೊಂಡಿರುವ ಅಯಾಜ್‌ನನ್ನ ಕೋಲಾರ ಆಸ್ಪತ್ರೆಗೆ ರವಾನಿಸಲಾಗಿದೆ. ಕೆಂಚಾರ್ಲಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಉಪಚುನಾವಣೆಗಾಗಿ ಬಿಎಸ್‌ವೈ ಜೊತೆ ಚರ್ಚೆ, ಯಾರಿಗೆ ಟಿಕೆಟ್ ಕೊಟ್ಟರೂ ಗೆಲ್ಲಿಸಲು ತೀರ್ಮಾನ: ಬೊಮ್ಮಾಯಿ

Share This Article