– ಪತಿ ಅತ್ಯಾಚಾರ ಪ್ರಕರಣವನ್ನು ಸಂಧಾನ ಮಾಡಲು ಹೋಗಿದ್ದ ಮಹಿಳೆ
ಭೋಪಾಲ್: ಸಂಧಾನ ಮಾಡಲು ತೆರಳಿದ್ದ ಗರ್ಭಿಣಿಯ (Pregnant Women) ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿ, ಬೆಂಕಿ ಹಚ್ಚಿ ಹತ್ಯೆಗೈಯಲು ಯತ್ನಿಸಿದ ಭೀಕರ ಘಟನೆ ಮಧ್ಯಪ್ರದೇಶದ (Madhya Pradesh) ಮೊರೇನಾ ಜಿಲ್ಲೆಯಲ್ಲಿ ನಡೆದಿದೆ.
38 ವರ್ಷದ ಸಂತ್ರಸ್ಥೆಯು ತನ್ನ ಪತಿ ಮಾಡಿದ ಅತ್ಯಾಚಾರಕ್ಕೆ ಮಾತನಾಡಿ ಸಂಧಾನ ನಡೆಸಲು ಆರೋಪಿಗಳ ಮನೆಗೆ ತೆರಳಿದ್ದರು. ಈ ವೇಳೆ ಅಲ್ಲಿನ ಮೂವರು ಆರೋಪಿಗಳು ಅತ್ಯಾಚಾರ ಎಸಗಿದ್ದಾರೆ.
Advertisement
Advertisement
ಬಳಿಕ ಸಂತ್ರಸ್ಥ ಮಹಿಳೆ ಪತಿಯ ಮೇಲೆ ಮೇಲೆ ಆತ್ಯಾಚಾರದ ಆರೋಪದ ಮಾಡಿದ್ದ ಮಹಿಳೆ, ಗರ್ಭಿಣಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ಮಹಿಳೆಗೆ ಶೇ.80 ರಷ್ಟು ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಸದ್ದಿಲ್ಲದೇ ಬಸ್ ಹತ್ತಿ, ಮೊಬೈಲ್ ಎಗರಿಸಿಕೊಂಡು ಹೋಗ್ತಿದ್ರು; 120 ಮೊಬೈಲ್‌ಗಳೊಂದಿಗೆ ಕಳ್ಳಿಯರ ಗ್ಯಾಂಗ್ ಸಿಕ್ಕಿಬಿದ್ದಿದ್ದು ಹೇಗೆ?
Advertisement
Advertisement
ಸದ್ಯ ಅತ್ಯಾಚಾರ ಪ್ರಕರಣದಲ್ಲಿ ಸದ್ಯ ಸಂತ್ರಸ್ತೆಯ ಪತಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಸ್ಥಳೀಯ ಮ್ಯಾಜಿಸ್ಟ್ರೇಟ್ ಬಳಿ ಸಂಸ್ತ್ರಸ್ತೆ ಹೇಳಿಕೆ ದಾಖಲಿಸಿದ್ದಾರೆ. ಪೊಲೀಸರು ಈವರೆಗೆ ಹೇಳಿಕೆ ದಾಖಲಿಸಿಲ್ಲ, ಆದ್ರೆ ತನಿಖೆ ಮುಂದುವರಿಸುತ್ತಿರುವುದಾತಿ ತಿಳಿಸಿದ್ದಾರೆ. ಇದನ್ನೂ ಓದಿ: ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ – ವಾರ್ಡನ್, ತಾಲೂಕಾಧಿಕಾರಿ ವಿರುದ್ಧ ದೂರು ದಾಖಲು
ಮಾಹಿತಿ ಪ್ರಕಾರ, ಸಂತ್ರಸ್ತೆಯ ಪತಿ ಸುರೇಶ್ ಸಂಖ್ವಾರ್ ಮೊರೆನಾ ಜಿಲ್ಲೆಯ ಅಂಬಾಹ್ ಪಟ್ಟಣದ ಚಾಂದ್‌ಪುರದ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ. ಆಕೆ ಮದುವೆ ವಿಷಯ ಪ್ರಸ್ತಾಪಿಸಿದಾಗ ಸುರೇಶ್ ಅದನ್ನು ನಿರಾಕರಿಸಿದ್ದ. ಹಾಗಾಗಿ ಮಹಿಳೆ ಪತಿ ಮೇಲೆ ಅತ್ಯಾಚಾರ ಆರೋಪ ಹೊರಿಸಿದ್ದಳು. ಈ ಪ್ರಕರಣವನ್ನು ಸಂತ್ರಸ್ತೆ ಸಂಧಾನ ಮಾಡಲು ಹೋದಾಗಲೇ ದುರುಳರು ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.