ಮೈಸೂರು: ತಾಯಿಯ ಅಕ್ರಮ ಸಂಬಂಧದಿಂದ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಣಸನಾಳು ಗ್ರಾಮದಲ್ಲಿ ನಡೆದಿದೆ.
ಮಹೇಂದ್ರ (20) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ. ಇದನ್ನೂ ಓದಿ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ತನ್ನ ತಾಯಿಯ ಅಕ್ರಮ ಸಂಬಂಧದ ವಿಚಾರವಾಗಿ ಆಗಾಗ್ಗೆ ಮನೆಯಲ್ಲಿ ತಂದೆ-ತಾಯಿ ನಡುವೆ ಗಲಾಟೆ ಆಗುತ್ತಿತ್ತು. ಇದರಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ ಮಹೇಂದ್ರ ನೇಣಿಗೆ ಶರಣಾಗಿದ್ದಾನೆ.
ವಿಷಯ ತಿಳಿದು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಎಂಗೇಜ್ಮೆಂಟ್ ನಿಂತು ಹೋಗಿದ್ದಕ್ಕೆ ಬೆಂಗ್ಳೂರಲ್ಲಿ ಕಾನೂನು ವಿದ್ಯಾರ್ಥಿನಿ ಆತ್ಮಹತ್ಯೆ
ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.