Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು | ಮರದ ಕೊಂಬೆ ಬಿದ್ದು ಆಸ್ಪತ್ರೆ ಸೇರಿದ್ದ ಯುವಕನ ಬ್ರೈನ್ ಡೆಡ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರು | ಮರದ ಕೊಂಬೆ ಬಿದ್ದು ಆಸ್ಪತ್ರೆ ಸೇರಿದ್ದ ಯುವಕನ ಬ್ರೈನ್ ಡೆಡ್

Bengaluru City

ಬೆಂಗಳೂರು | ಮರದ ಕೊಂಬೆ ಬಿದ್ದು ಆಸ್ಪತ್ರೆ ಸೇರಿದ್ದ ಯುವಕನ ಬ್ರೈನ್ ಡೆಡ್

Public TV
Last updated: June 18, 2025 10:36 am
Public TV
Share
2 Min Read
Bengaluru Tree Fall Case
SHARE

ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದಾಗಲೇ ಮರದ (Tree) ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಅಕ್ಷಯ್‌ನ ಬ್ರೈನ್‌ ಡೆಡ್‌ (Brain Dead – ಮೆದುಳು ನಿಷ್ಕ್ರಿಯ) ಆಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಇದೇ ಜೂನ್‌ 15ರಂದು ಬಸವನಗುಡಿಯ (Basavanagudi) ಬ್ರಹ್ಮ ಚೈತನ್ಯ ಮಂದಿರದ ಬಳಿ ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಅಕ್ಷಯ್‌ (29)ಗೆ ವೈದ್ಯರು ಶಸ್ತ್ರ ಚಿಕಿತ್ಸೆ ನೆರವೇರಿಸಿದ್ದರು. ಆದ್ರೆ ಶಸ್ತ್ರಚಿಕಿತ್ಸೆ ನಡೆದು 60 ತಾಸು ಕಳೆದ ಬಳಿಕವೂ ಮೆದುಳು ಸ್ಪಂದಿಸದೇ ಇರುವುದರಿಂದ ವೈದ್ಯರು ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಪರಿಗಣಿಸಿರುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಗಾಳಿ ಇಲ್ಲ, ಮಳೆ ಇಲ್ಲ – ಸಿಎಂ ನಿವಾಸದ ಮುಂದೆ ಧರೆಗುರುಳಿದ ಬೃಹತ್ ಮರ

ಸಹಜವಾಗಿ ಶಸ್ತ್ರಚಿಕಿತ್ಸೆ ಮುಗಿದು 48 ಗಂಟೆಗಳ ನಂತರವು ಮೆದುಳು ಸ್ಪಂದಿಸದೇ ಇದ್ದರೆ ಮೆದುಳು ನಿಷ್ಕ್ರಿಯ ಎಂದು ಪರಿಗಣಿಸಲಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಆದ್ರೆ ಅಕ್ಷಯ್‌ ಕೇಸ್‌ನಲ್ಲಿ 60 ಗಂಟೆ ಕಳೆದರೂ ಮೆದುಳು ಸ್ಪಂದಿಸದೇ ಇರುವ ಕಾರಣ ಮೆದುಳು ನಿಷ್ಕ್ರಿಯವಾಗಿದೆ ಎಂದು ಕುಟುಂಬಸ್ಥರಿಗೆ ವೈದ್ಯರು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ವರುಣಾರ್ಭಟಕ್ಕೆ ಬಿರುಕು ಬಿಟ್ಟ ನಿಜಾಮರ ಕಾಲದ ಸೇತುವೆ – ಇತ್ತ ಮಲೆನಾಡಲ್ಲಿ ನದಿಗಳಿಗೆ ಜೀವಕಳೆ

ಏನಾಗಿತ್ತು?
ಇದೇ ಜೂ.15ರಂದು ಯುವಕ ಅಕ್ಷಯ್ ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದಾಗಲೇ ಮರದ ಕೊಂಬೆ ಬಿದ್ದು ಬಸವನಗುಡಿಯ ಬ್ರಹ್ಮ ಚೈತನ್ಯ ಮಂದಿರದ ಬಳಿ ಸವಾರ ಗಂಭೀರವಾಗಿ ಗಾಯಗೊಂಡಿದ್ದರು. ಕೊಂಬೆ ಬೀಳುತ್ತಿದ್ದಂತೆ ನಿಯಂತ್ರಣ ತಪ್ಪಿ ಎದುರುಗಡೆ ನಿಲ್ಲಿಸಿದ್ದ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿತ್ತು. ಇದನ್ನೂ ಓದಿ:  ಬೆಂಗಳೂರಿನ 10 ಮೆಟ್ರೋ ಸ್ಟೇಷನ್‌ನಲ್ಲಿ ಅಮುಲ್‌ಗೆ ಪ್ರಮೋಷನ್ – ಕನ್ನಡಿಗರು ಕೆಂಡ

Tree branch falls in Basanavgudi bengaluru Rider injured

ಶ್ರೀನಿವಾಸನಗರದ ನಿವಾಸಿಯಾಗಿರುವ ಅಕ್ಷಯ್ ರಾಜಾಜಿನಗರದರುವ ಖಾಸಗಿ ಕಂಪನಿಯೊಂದರಲ್ಲಿ ಹೆಚ್‌ಆರ್ ಆಗಿ ಕೆಲಸ ಮಾಡುತ್ತಿದ್ದರು. ಮರದ ಕೊಂಬೆ ಬಿದ್ದು ತಲೆಯ ಮಧ್ಯ ಭಾಗಕ್ಕೆ ತೀವ್ರ ಹಾನಿಯಾಗಿತ್ತು. ಮೂಗು, ಬಾಯಿ, ಕಿವಿಯಲ್ಲಿ ರಕ್ತಸ್ರಾವವಾಗಿತ್ತು. ಅಕ್ಷಯ್ ತಂದೆಗೆ ಡಯಾಲಿಸಿಸ್ ನಡೆಯುತ್ತಿದ್ದು, ಕುಟುಂಬಕ್ಕೆ ಅಕ್ಷಯ್ ಆಧಾರವಾಗಿದ್ದರು. ಇದನ್ನೂ ಓದಿ: KRS ಡ್ಯಾಂ ಭರ್ತಿಗೆ 11 ಅಡಿಯಷ್ಟೇ ಬಾಕಿ

ಚಿಕಿತ್ಸಾ ವೆಚ್ಚ ಭರಿಸದ ಬಿಬಿಎಂಪಿ
ಸದ್ಯಕ್ಕೆ ಅಕ್ಷಯ್‌ ಬದುಕುಳಿಯುವ ಬಗ್ಗೆ ಯಾವುದೇ ಭರವಸೆ ಕೊಡೋದಕ್ಕಾಗಲ್ಲ ಅಂತ ವೈದ್ಯರು ಹೇಳ್ತಿದ್ದಾರೆ. ಅಕ್ಷಯ್ ಆಸ್ಪತ್ರೆಗೆ ಸೇರಿ 4 ದಿನ ಆಗ್ತಿದ್ರೂ ಬಿಬಿಎಂಪಿ ಚಿಕಿತ್ಸಾ ವೆಚ್ಚ ಭರಿಸಿಲ್ಲ. ಕುಟುಂಬಸ್ಥರೇ ಆಸ್ಪತ್ರೆಗೆ ಈವರೆಗೆ 1,30,000ಕ್ಕೂ ಹೆಚ್ಚು ಬಿಲ್ ಕಟ್ಟಿದ್ದಾರೆ ಎಂದು ತಿಳಿದುಬಂದಿದೆ.

TAGGED:basavanagudibbmpbengaluruBengaluru Rainsbrain deadTree Fallಬಿಬಿಎಂಪಿಬೆಂಗಳೂರು ಆಸ್ಪತ್ರೆಬ್ರೈನ್ ಡೆಡ್ಮರದ ಕೊಂಬೆ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
1 hour ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
1 hour ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
2 hours ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
2 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
2 hours ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?