ದೀಪಾವಳಿ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸದ್ದಕ್ಕೆ ಯುವಕ ಆತ್ಮಹತ್ಯೆ

Public TV
1 Min Read
ANEKAL SUICIDE

ಆನೇಕಲ್: ದೀಪಾವಳಿ (Deepavali) ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸಿಲ್ಲ ಎಂದು ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ತಮಿಳುನಾಡಿನ ಡೆಂಕಣಿಕೋಟೆ ಸಮೀಪದ ಉಳಿಮಂಗಲಂ ನಲ್ಲಿ ಈ ಪ್ರಕರಣ ನಡೆದಿದೆ. ಮೃತನನ್ನು ಶಿವಕುಮಾರ್(19) ಎಂದು ಗುರುತಿಸಲಾಗಿದೆ. ನರ್ಸರಿ ಫಾರ್ಮ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಕುಮಾರ್, ಇದೀಗ ಪೋಷಕರು ಬಟ್ಟೆ (New Dress) ಕೊಡಿಸಿಲ್ಲ ಎಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ಪತ್ನಿಯನ್ನು ಉಳಿಸೋ ಬದ್ಲು ವೀಡಿಯೋ ಮಾಡಿಕೊಂಡ ಪತಿ

Police Jeep

ಇತ್ತೀಚೆಗೆ ಯುವಕರ ಜೊತೆ ಸೇರಿ ಶಿವಕುಮಾರ್ ಮದ್ಯವ್ಯಸನಿಯಾಗಿದ್ದ. ಈ ಮಧ್ಯೆ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸುವಂತೆ ಪೋಷಕರ ಬಳಿ ಕೇಳಿದ್ದ. ಆದರೆ ಪೋಷಕರು ಬಟ್ಟೆ ಕೊಡಿಸಲು ನಿರಾಕರಿಸಿದ್ದಾರೆ. ಇದರಿಂದ ಮನನೊಂದು ತನ್ನ ಜೀವವನ್ನೇ ಕಳೆದುಕೊಂಡಿದ್ದಾನೆ. ಬಾತ್ ರೂಮ್ ನಲ್ಲಿ ನೇಣು ಹಾಕಿಕೊಂಡಿದ್ದಾನೆ.

POLICE JEEP

ಸ್ಥಳಕ್ಕೆ ಡೆಂಕಣಿಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಡೆಂಕಣಿಕೋಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು, ಡೆಂಕಣಿಕೋಟೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: ಗಿಫ್ಟ್ ನೀಡೋ ನೆಪದಲ್ಲಿ 18 ಲಕ್ಷ ರೂ. ವಂಚನೆ – ವಿದೇಶಿ ಜೋಡಿಯಿಂದ ಮಹಿಳೆಗೆ ಪಂಗನಾಮ

Live Tv
[brid partner=56869869 player=32851 video=960834 autoplay=true]

Share This Article