Bengaluru | ರಸ್ತೆಬದಿ ನಿಂತಿದ್ದ ವಾಹನಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Public TV
1 Min Read
Bengaluru Youth Suicide

ಬೆಂಗಳೂರು: ರಸ್ತೆಬದಿ ನಿಂತಿದ್ದ ವಾಹನಕ್ಕೆ ತಡರಾತ್ರಿ ನೇಣು ಬಿಗಿದುಕೊಂಡು ಯುವಕ (Youth) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು (Bengaluru) ಉತ್ತರ ತಾಲೂಕಿನ ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದಿದೆ.

ನವೀನ್ (30) ಆತ್ಮಹತ್ಯೆಗೆ ಶರಣಾದ ಯುವಕ. ನವೀನ್ ಮೊದಲಿಗೆ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ರಕ್ತ ಸ್ರಾವವಾಗಿದ್ದರೂ ಸಾವನ್ನಪ್ಪದ ಹಿನ್ನೆಲೆ ರಸ್ತೆಬದಿ ನಿಂತಿದ್ದ ವಾಹನಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಆಪರೇಷನ್‌ ಸಿಂಧೂರ | ಲೋಕಸಭೆಯಲ್ಲಿಂದು 16 ಗಂಟೆಗಳ ಮ್ಯಾರಥಾನ್‌ ಚರ್ಚೆ, ಪ್ರಧಾನಿ ಮೋದಿ ಭಾಗಿ

ನವೀನ್ ಈ ಹಿಂದೆ ಅಪಘಾತದಲ್ಲಿ ಕಾಲು ಮುರಿದುಕೊಂಡಿದ್ದ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಆತ್ಮಹತ್ಯೆಗೆ ಕಾರಣ ಏನು ಎಂಬುದನ್ನು ಪೊಲೀಸರು ಪತ್ತೆಮಾಡುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಮಲೆನಾಡು ಭಾಗದಲ್ಲಿ ನಿರಂತರ ಮಳೆ – ಅಪಾಯಮಟ್ಟ ಮೀರಿ ಹರಿಯುತ್ತಿದೆ ತುಂಗಭದ್ರಾ ನದಿ

Share This Article