ಚಿಕ್ಕೋಡಿ (ಬೆಳಗಾವಿ): ಯುವಕನೊಬ್ಬ ಕುಡಿದ ಮತ್ತಿನಲ್ಲಿ ಬ್ಲೇಡ್‍ನಿಂದ ಕೈ ಕೊಯ್ದುಕೊಂಡ ಘಟನೆ ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ.
ಮೃತ ಯುವಕನನ್ನು ಪರಶುರಾಮ ತೇಲಸಂಗ (32) ಎಂದು ಗುರುತಿಸಲಾಗಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ನಿವಾಸಿಯಾಗಿದ್ದ ಪರಶುರಾಮ ತೇಲಸಂಗ, ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಗ್ರಾಮದ ಲಕ್ಷ್ಮೀ ದೇವಸ್ಥಾನದ ಬಳಿ ಬ್ಲೇಡ್‍ನಿಂದ ಕೈ ಕೊಯ್ದುಕೊಂಡಿದ್ದ. ಇದನ್ನೂ ಓದಿ: ಅನಾರೋಗ್ಯದಿಂದ ಮೃತಪಟ್ಟರೂ ಬಾರದ ವಿದೇಶದಲ್ಲಿರೋ ಮಕ್ಕಳು – ಅಂತ್ಯಕ್ರಿಯೆ ಮಾಡಿ ಮಾನವೀಯತೆ ಮೆರೆದ ಪೊಲೀಸರು
ಕೂಡಲೇ ಸ್ಥಳೀಯರು ಆತನನ್ನು ಅಥಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ತೀವ್ರ ರಕ್ತಸ್ರಾವ ಉಂಟಾದ ಪರಿಣಾಮ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ.
ಈ ಘಟನೆ ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]