ಬೆಂಗಳೂರು: ಪಾರ್ಕ್ ಮಾಡಿದ್ದ ಕಾರಿನಲ್ಲಿ ಹೃದಯಾಘಾತದಿಂದ ಯುವಕ ಸಾವನ್ನಪ್ಪಿರುವ ಘಟನೆ ನಗರದ ಬ್ರೂಕ್ ಫೀಲ್ಡ್ ರಸ್ತೆಯಲ್ಲಿ (Brookefield Road) ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಇದನ್ನೂ ಓದಿ: ನೀವು ಹೇಳಿದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ – ಪಟ್ಟದ ಫೈಟ್ ನಡುವೆ ಪರಂ ಮಾತು
Advertisement
ಫೆ.20ರಂದು ಈ ಅವಘಡ ಸಂಭವಿಸಿದ್ದು, ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ತನ್ನ ಗ್ರ‍್ಯಾಂಡ್ ಐಟೆನ್ ಕಾರಿನಲ್ಲಿ ಮೃತಪಟ್ಟಿದ್ದು, ಮೃತದೇಹ ನೋಡಿದ ಅಪರಿಚಿತ ವ್ಯಕ್ತಿ ಹಾಗೂ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
Advertisement
ಕೂಡಲೇ ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಇದನ್ನೂ ಓದಿ: ಮಂಡ್ಯದಲ್ಲಿ ನಾಡ ಬಾಂಬ್ ಸ್ಫೋಟ – ವಿದ್ಯಾರ್ಥಿಯ ಅಂಗೈ ಛಿದ್ರ