ಮಂಡ್ಯ: ಈಜಲು ಹೋದ ಯುವಕನೋರ್ವ ಕಾವೇರಿ ನದಿಯಲ್ಲಿ (Cauvery River) ನೀರಿನ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ (Muthathi) ನಡೆದಿದೆ.
ಬೆಂಗಳೂರಿನ ಪಾಪಯ್ಯ ಗಾರ್ಡನ್ ನಿವಾಸಿ ಆರ್. ವಿಜಯ್ ಕುಮಾರ್ ಅವರ ಪುತ್ರ ಭಾರ್ಗವ್ (22) ಮೃತ ಯುವಕನಾಗಿದ್ದಾನೆ. ಬೆಂಗಳೂರಿನ ಬನಶಂಕರಿಯಲ್ಲಿ ಖಾಸಗಿ ಶಾಲೆಯಲ್ಲಿ ಬಸ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಈತ ಶನಿವಾರ ತನ್ನ ಎಂಟು ಮಂದಿ ಸ್ನೇಹಿತರೊಂದಿಗೆ ಆಟೋ ಮತ್ತು ಕಾರಿನಲ್ಲಿ ಮುತ್ತತ್ತಿ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಪ್ರವಾಸಕ್ಕೆ ಬಂದಿದ್ದನು. ಊಟ ಮುಗಿಸಿ ಕಾವೇರಿ ನದಿಯಲ್ಲಿ ಈಜಾಡಲು ಹೋದಾಗ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾನೆ. ಇದನ್ನೂ ಓದಿ: ಮದುವೆಗೂ ಮುನ್ನಾ ದಿನ ಅಕ್ಕ-ತಂಗಿ ಆತ್ಮಹತ್ಯೆ
ನುರಿತ ಸ್ಥಳೀಯ ಈಜುಗಾರರ ಸಹಾಯದಿಂದ ಯುವಕನ ಮೃತ ದೇಹವನ್ನ ನದಿಯಿಂದ ಹೊರತೆಗೆಯಲಾಯಿತು. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಕಲಿ ಬ್ಯಾಂಕ್ ಖಾತೆ ತೆರೆದು ಸೈಬರ್ ವಂಚಕರಿಗೆ ಸಹಾಯ – ಎಂಜಿನಿಯರಿಂಗ್ ವಿದ್ಯಾರ್ಥಿ ಸೇರಿ ಇಬ್ಬರು ಅರೆಸ್ಟ್

