ಕಾರವಾರ: ಯುವಕನೊಬ್ಬ ಕಾಲುಜಾರಿ ಹಳ್ಳಕ್ಕೆ ಬಿದ್ದು ನಾಪತ್ತೆಯಾದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿ (Sirsi) ತಾಲೂಕಿನ ಜೋಗನ ಹಕ್ಕಲು ಜಲಪಾತದಲ್ಲಿ (Jogana Hakkalu Falls) ನಡೆದಿದೆ.
ನಾಪತ್ತೆಯಾದ ಯುವಕನನ್ನು ಸೋಮನಳ್ಳಿ ಗ್ರಾಮದ ಉಂಬಳೆ ಕೊಪ್ಪದ ಪವನ್ ಗಣಪತಿ ಜೋಗಿ (24) ಎಂದು ಗುರುತಿಸಲಾಗಿದೆ. ಸ್ನೇಹಿತ ವಾಸುದೇವ್ ಜೊತೆ ಪವನ್ ಫಾಲ್ಸ್ ನೋಡಲು ಭಾನುವಾರ ಸಂಜೆ ತೆರಳಿದ್ದ. ಜಲಪಾತದ ಸಮೀಪ ರಭಸವಾಗಿ ಹರಿಯುತ್ತಿದ್ದ ಹಳ್ಳವನ್ನ ದಾಟುವಾಗ ಕಾಲುಜಾರಿ ಬಿದ್ದು ಕೊಚ್ಚಿಕೊಂಡು ಹೋಗಿದ್ದಾನೆ. ಇದನ್ನೂ ಓದಿ: ಮಳೆ ಅಬ್ಬರ – ಮುರುಡೇಶ್ವರದಲ್ಲಿ ಕಡಲ ತೀರಕ್ಕೆ ನಿಷೇಧ
ಘಟನಾ ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ. ನಾಪತ್ತೆಯಾದ ಯುವಕನ ಶೋಧ ಕಾರ್ಯ ನಡೆಯುತ್ತಿದೆ. ಇದನ್ನೂ ಓದಿ: ಕದಂಬ ನೌಕಾನೆಲೆಗಾಗಿ ಭೂಮಿ ಕೊಟ್ಟವರಿಗೆ 30 ವರ್ಷದ ನಂತರ ಸಿಕ್ತು ಪರಿಹಾರ