ಶಿವಮೊಗ್ಗ: ಮನೆಯಲ್ಲಿ ಮಲಗಿದ್ದ ಯುವಕನನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಶಿವಮೊಗ್ಗ (Shivamogga) ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಪ್ರವೀಣ್ (29) ಕೊಲೆಯಾದ ಯುವಕ. ಈತ ಟ್ರ್ಯಾಕ್ಟರ್ ಬಾಡಿಗೆ ಹಾಗೂ ಇತರೆ ಕೆಲಸಗಳನ್ನು ಮಾಡಿಕೊಂಡಿದ್ದ. ಎಂದಿನಂತೆ ಗುರುವಾರ ರಾತ್ರಿ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದಾಗ ಆತನನ್ನು ಹತ್ಯೆ ಮಾಡಲಾಗಿದೆ. ಇದನ್ನೂ ಓದಿ: ʻಇವತ್ತು ಡಿಫರೆಂಟ್ ಆಗಿ ಏನಾದ್ರೂ ಮಾಡ್ತೀನಿʼ – ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ ನೀಟ್ ಆಕಾಂಕ್ಷಿ
ಕೆಲಸಕ್ಕೆ ಬರುವಂತೆ ಹಿಂದಿನ ದಿನ ಕೆಲವು ಯುವಕರಿಗೆ ಪ್ರವೀಣ್ ತಿಳಿಸಿದ್ದ. ಇಂದು ಬೆಳಗ್ಗೆ ಯುವಕರು ಕರೆ ಮಾಡಿದಾಗ ಸ್ವೀಕರಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಮನೆಗೆ ಬಂದು ಪರಿಶೀಲಿಸಿದಾಗ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ.
ವ್ಯವಹಾರಿಕ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಕುಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ರುಕ್ಮಿಣಿ ವಸಂತ್ AI ಬಿಕಿನಿ ಫೋಟೋ ವೈರಲ್ ಕೇಸ್ – 20 ಲಕ್ಷ ಸಂಬಳ ಪ್ಯಾಕೇಜ್ ಹೊಂದಿದ್ದ ಆರೋಪಿ ರಂಜಿತ್
