– ಸಾವಿನ ಸಂಖ್ಯೆ 24ಕ್ಕೆ ಏರಿಕೆ
ಹಾಸನ: ಎರಡೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ (Heart Attack) ಬಲಿಯಾಗಿರುವ ಘಟನೆ ಹಾಸನ (Hassan) ಜಿಲ್ಲೆ, ಹೊಳೆನರಸೀಪುರ (Holenarasipura) ತಾಲೂಕಿನ ಸೋಮನಹಳ್ಳಿಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಸಂಜಯ್ (27) ಮೃತ ವ್ಯಕ್ತಿ. ಸ್ನೇಹಿತರ ಜೊತೆ ಪಾರ್ಟಿಗೆ ಹೋಗಿದ್ದ ಸಂಜಯ್ ಸೋಮವಾರ ಸಂಜೆ ಎದೆನೋವು ಎಂದು ಸೋಮನಹಳ್ಳಿ ಪ್ರಾಥಮಿಕ ಆಸ್ಪತ್ರೆಗೆ ಹೋಗಿದ್ದ. ನಡೆಯಲೂ ಆಗದ ಸ್ಥಿತಿಯಲ್ಲಿ ಸಂಜಯ್‌ನನ್ನು ಸ್ನೇಹಿತರು ಆಸ್ಪತ್ರೆಗೆ ಕರೆದೊಯ್ದಿದ್ದರು. ಕೂಡಲೇ ವೈದ್ಯರು ಆತನ ಬಿಪಿ ಪರೀಕ್ಷೆ ಮಾಡಿದ್ದರು. ಈ ವೇಳೆ 220ಕ್ಕೂ ಅಧಿಕ ಪ್ರಮಾಣದಲ್ಲಿ ಬಿಪಿ ಇದ್ದ ಬಗ್ಗೆ ಮಾಹಿತಿ ಲಭಿಸಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬೇರೊಂದು ಆಸ್ಪತ್ರೆಗೆ ರೆಫರ್ ಮಾಡುವ ವೇಳೆಯೇ ಸಂಜಯ್ ಹಠಾತ್ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ತೆಲಂಗಾಣ ಔಷಧ ಕಾರ್ಖಾನೆಯಲ್ಲಿ ಸ್ಫೋಟ – ಸಾವಿನ ಸಂಖ್ಯೆ 35ಕ್ಕೆ ಏರಿಕೆ
ಸಂಜಯ್ ಸಾವಿನ ಬಗ್ಗೆ ಸಂಬಂಧಿಕರು ಅನುಮಾನಾಸ್ಪದ ಸಾವು ಎಂದು ದೂರು ನೀಡಿದ್ದಾರೆ. ಪ್ರಕರಣ ಸಂಬಂಧ ಹಳ್ಳಿ ಮೈಸೂರು ಠಾಣೆಯಲ್ಲಿ ಅನುಮಾನಾಸ್ಪದ ಸಾವು ಕೇಸ್ ದಾಖಲಾಗಿದೆ. ಅಸಹಜ ಸಾವು ಪ್ರಕರಣಗಳಲ್ಲಿ ಮರಣೊತ್ತರ ಪರೀಕ್ಷೆ ನಡೆಸಲು ನಿರ್ದೇಶನ ನೀಡಿದ್ದು, ಮರಣೋತ್ತರ ಪರೀಕ್ಷೆಗಾಗಿ ಹೊಳೆನರಸೀಪುರ ತಾಲೂಕು ಆಸ್ಪತ್ರೆಗೆ ಸಂಜಯ್ ಮೃತದೇಹ ಸ್ಥಳಾಂತರಿಸಲಾಗಿದೆ. ಇದನ್ನೂ ಓದಿ: ಹಣದಾಸೆ ತೋರಿಸಿ ಶ್ರೀಮಂತ ಮಹಿಳೆಯರ ಟಾರ್ಗೆಟ್ – ಬೆಂಗ್ಳೂರಿನ ಪ್ರತಿಷ್ಠಿತ ಸಲೂನ್‌ನಿಂದ 50 ಕೋಟಿ ವಂಚನೆ ಆರೋಪ
ಸೋಮವಾರ ಒಂದೇ ದಿನ ಹಾಸನ ಜಿಲ್ಲೆಯಲ್ಲಿ ಆರು ಹೃದಯಾಘಾತ ಪ್ರಕರಣ ವರದಿಯಾಗಿದೆ. ಸದ್ಯ ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. 40 ದಿನಗಳಲ್ಲಿ 24 ಜನರಿಗೆ ಹೃದಯಾಘಾತ ಆಗಿದೆ. ಇದನ್ನೂ ಓದಿ: ರಾಜಕಾರಣಿಗಳೊಂದಿಗೆ ಮಲಗಲು ಒಪ್ಪದಿದ್ದಕ್ಕೆ 6 ಬಾರಿ ತಲಾಖ್ – ಸೈಕೋ ಪತಿ ವರ್ತನೆಗೆ ಬೇಸತ್ತು ಪತ್ನಿ ದೂರು