ಚಿಕ್ಕಮಗಳೂರು: ಈಜಲು ಹೋಗಿದ್ದಾಗ ಸುಳಿಗೆ ಸಿಕ್ಕಿ ಯುವಕ ಸಾವನ್ನಪ್ಪಿದ ಘಟನೆ ಎನ್.ಆರ್.ಪುರ (N R Pura) ತಾಲೂಕಿನ ಗಡಿಗೇಶ್ವರದಲ್ಲಿ ನಡೆದಿದೆ.
ಮೃತನನ್ನು ಜಲಾಲ್ (25) ಎಂದು ಗುರುತಿಸಲಾಗಿದೆ. ಭಾನುವಾರ (ಫೆ.16) ಭದ್ರಾ ನದಿಯಲ್ಲಿ (Bhadra River) ಮೂವರು ಸ್ನೇಹಿತರ ಜೊತೆ ಈಜಲು ತೆರಳಿದ್ದಾಗ ಈ ಘಟನೆ ನಡೆದಿದೆ. ಜಲಾಲ್ ಸುಳಿಗೆ ಸಿಲುಕಿದ್ದರಿಂದ ಉಳಿದವರಿಗೆ ರಕ್ಷಿಸಲು ಸಾಧ್ಯವಾಗಿಲ್ಲ.
ಶವಕ್ಕಾಗಿ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ತೀವ್ರ ಶೋಧ ಕಾರ್ಯ ನಡೆಸಿದ್ದರು. ಆದರೂ ಶವ ಪತ್ತೆಯಾಗಿರಲಿಲ್ಲ. ಇಂದು (ಫೆ.17) ಮುಳುಗು ತಜ್ಞರು, ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.