ತುಮಕೂರು: ಹೊಸ ವರ್ಷಕ್ಕೆ ಕೇಕ್ (Cake) ತರಲು ಹೋದ ಯುವಕ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ತುಮಕೂರು (Tumakuru) ಜಿಲ್ಲೆ ಕುಣಿಗಲ್ (Kunigal) ತಾಲೂಕಿನ ವಡ್ಡರಕುಪ್ಪೆ ಬಳಿ ನಡೆದಿದೆ.
ಘಟನೆಯಲ್ಲಿ ಮಣಿಕುಪ್ಪೆ ಗ್ರಾಮದ 28 ವರ್ಷದ ಯುವಕ ಮಧು ಸಾವನಪ್ಪಿದ್ದಾನೆ. ಕೇಕ್ ಮತ್ತು ಬಿರಿಯಾನಿ ತೆಗೆದುಕೊಂಡು ಬೈಕಲ್ಲಿ ಬರುವಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಮುಂಬೈ | 232 ಕೆಜಿ ಮಾದಕ ವಸ್ತು ಕಳ್ಳಸಾಗಾಣಿಕೆ ಕೇಸ್ – 8 ಪಾಕ್ ಪ್ರಜೆಗಳಿಗೆ 20 ವರ್ಷ ಜೈಲು
Advertisement
Advertisement
ಕೂಡಲೇ ಸ್ಥಳೀಯರು ಕುಣಿಗಲ್ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದಿ.ಮನಮೋಹನ್ ಸಿಂಗ್‌ಗೆ ಭಾರತ ರತ್ನ ನೀಡುವಂತೆ ಕಾಂಗ್ರೆಸ್ ಒತ್ತಡ
Advertisement