ರಾಮನಗರ: ಜಿಲ್ಲೆಯಲ್ಲಿ ಮತ್ತಷ್ಟು ಚಿರತೆ (Leopard) ದಾಳಿ ಭೀತಿ ಹೆಚ್ಚಿದ್ದು, ಚಿರತೆ ದಾಳಿಯಿಂದ ತಪ್ಪಿಸಿಕೊಳ್ಳಲು ಕುರಿ ಕಾಯುತ್ತಿದ್ದ ಯುವತಿ ಮರವೇರಿರುವಂತಹ ಘಟನೆ ಮಾಗಡಿ ತಾಲೂಕಿನ ಮರಳುದೇವನ ಪುರ ಗ್ರಾಮದಲ್ಲಿ ನಡೆದಿದೆ.
ಗಡಿಬಿಡಿಯಲ್ಲಿ ಮರ ಏರುವಾಗ ಕೆಳಗೆ ಬಿದ್ದು ಯುವತಿಗೆ ಗಂಭೀರ ಗಾಯವಾಗಿದೆ. ಮರಳುದೇವನಪುರ ಗ್ರಾಮದ ವಿಜಯಲಕ್ಷ್ಮಿ ಚಿರತೆಯಿಂದ ಪಾರಾದ ಯುವತಿ. ಇದನ್ನೂ ಓದಿ: ಟಿ.ನರಸೀಪುರದಲ್ಲಿ ಕೊನೆಗೂ ಚಿರತೆ ಸೆರೆ – ಸ್ಥಳದಲ್ಲೇ ಕೊಂದುಹಾಕಿ ಅಂತಾ ಜನರ ಪಟ್ಟು
ಜಮೀನಿನ ಬಳಿ ಕುರಿ ಮೇಯಿಸುತ್ತಿದ್ದಾಗ ಚಿರತೆ ಕಾಣಿಸಿಕೊಂಡಿದೆ. ಗಾಬರಿಗೊಂಡ ಯುವತಿ ಚಿರತೆ ದಾಳಿಯಿಂದ ತಪ್ಪಿಸಿಕೊಳ್ಳಲು ಮರವೇರಿದ್ದಾಳೆ. ಬಳಿಕ ಮರದಿಂದ ಇಳಿಯುವಾಗ ಆಯತಪ್ಪಿ ಕೆಳಗೆ ಬಿದ್ದು ಸೊಂಟ ಮುರಿದುಕೊಂಡಿದ್ದಾಳೆ.
ಗಾಯಾಳು ವಿಜಯಲಕ್ಷ್ಮಿಯನ್ನು ಮಾಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಲ್ಲದೇ ಚಿರತೆ ಸೆರೆ ಹಿಡಿದು ಸ್ಥಳಾಂತರಿಸುವಂತೆ ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ. ಈ ಸಂಬಂಧ ಮಾಗಡಿ ಪೊಲೀಸ್ ಠಾಣೆ (Magadi Police Station) ಯಲ್ಲಿ ಪ್ರಕರಣ ದಾಖಲಾಗಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k