ಚಿಕ್ಕಮಗಳೂರು: ಸಂಬಂಧಿಯೊಬ್ಬರ ಮನೆಗೆ ದೀಪಾವಳಿ (Deepavali) ಹಬ್ಬಕ್ಕೆ ಹೊರಟಿದ್ದಾಗ ಬೈಕ್ ನಿಯಂತ್ರಣ ತಪ್ಪಿ ಮಣ್ಣಿನ ದಿಬ್ಬಕ್ಕೆ ಡಿಕ್ಕಿಯಾಗಿ (Accident) ಯುವತಿ ಸಾವನ್ನಪ್ಪಿದ ಘಟನೆ ತರೀಕೆರೆ (Tarikere) ತಾಲೂಕಿನ ಭೈರಾಪುರ ಕ್ರಾಸ್ ಬಳಿ ನಡೆದಿದೆ. ಈ ಅಪಘಾತದಲ್ಲಿ ಬೈಕ್ ಚಲಾಯಿಸುತ್ತಿದ್ದ ಯುವತಿಯ ತಂದೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಶಾಂತಿನಗರ ನಿವಾಸಿ ದ್ರಾಕ್ಷಾಯಿಣಿ (20) ಮೃತ ದುರ್ದೈವಿ. ಯುವತಿಯ ತಂದೆ ರಮೇಶ್ ಸ್ಥಿತಿ ಗಂಭೀರವಾಗಿದೆ. ಗಾಯಾಳು ರಮೇಶ್ ಅವರಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಂದೆ ಹಾಗೂ ಮಗಳು ಶಾಂತಿನಗರದಿಂದ ಎಂ.ಸಿ.ಹಳ್ಳಿ ಗ್ರಾಮಕ್ಕೆ ಸಂಬಂಧಿಯೊಬ್ಬರ ಮನೆಗೆ ಹಬ್ಬಕ್ಕೆ ತೆರಳುವಾಗ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಪಘಾತ ಸಂಬಂಧ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಳ್ಳಾರಿ | ಕುರಿ ಹಿಂಡಿನ ಮೇಲೆ ಲಾರಿ ಹರಿದು 80ಕ್ಕೂ ಹೆಚ್ಚು ಕುರಿಗಳು ಸಾವು
