ವಾಷಿಂಗ್ಟನ್: ರಸ್ತೆ ದಾಟುತ್ತಿದ್ದ ಸಂದರ್ಭ ಕಾರು ಡಿಕ್ಕಿ ಹೊಡೆದ ಪರಿಣಾಮ ತೆಲಂಗಾಣ (Telangana) ಮೂಲದ ಯುವತಿ ಅಮೆರಿಕದ (America) ಫ್ಲೋರಿಡಾದಲ್ಲಿ ಸಾವನ್ನಪ್ಪಿದ್ದಾರೆ.
ಭಾನುವಾರ ರಾತ್ರಿ ಘಟನೆ ನಡೆದಿದ್ದು, ಯಾದಾದ್ರಿ ಭೋಂಗಿರ್ ಜಿಲ್ಲೆಯ ಯಾದಗರಿಪಲ್ಲಿ ಮೂಲದ ಸೌಮ್ಯಾ (25) ಅಪಘಾತದಲ್ಲಿ (Accident) ಮೃತಪಟ್ಟಿದ್ದಾರೆ. ಸೌಮ್ಯಾ ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳಿದ್ದರು. ಫ್ಲೋರಿಡಾ (Florida) ಅಟ್ಲಾಂಟಿಕ್ ವಿಶ್ವವಿದ್ಯಾನಿಲಯದಿಂದ ಪದವಿ ಪೂರ್ಣಗೊಳಿಸಿದ್ದ ಸೌಮ್ಯ ಅಲ್ಲೇ ಉದ್ಯೋಗ ಹುಡುಕುತ್ತಿದ್ದರು. ಇದನ್ನೂ ಓದಿ: ಶಾಂತವಾಗುತ್ತಿದೆ ರೆಮಾಲ್ ಚಂಡಮಾರುತ – ಪಶ್ಚಿಮ ಬಂಗಾಳ, ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆ
ಭಾನುವಾರ ರಾತ್ರಿ ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದು ಸೌಮ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೌಮ್ಯಾ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ. ಆಕೆಯ ಮೃತದೇಹವನ್ನು ಭಾರತಕ್ಕೆ ತರುವಂತೆ ಆಕೆಯ ಪೋಷಕರಾದ ಕೋಟೇಶ್ವರ ರಾವ್ ಮತ್ತು ಬಾಲಾಮಣಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಗೇಮಿಂಗ್ ಝೋನ್‌ನಲ್ಲಿ ಅಗ್ನಿ ಅವಘಡ ಪ್ರಕರಣ – 7 ಅಧಿಕಾರಿಗಳು ಅಮಾನತು
ತೆಲಂಗಾಣ ಸಚಿವ ಕೋಮಟಿರೆಡ್ಡಿ ವೆಂಕಟ್ ರೆಡ್ಡಿ ಸೌಮ್ಯಾ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಆಕೆಯ ಪಾರ್ಥಿವ ಶರೀರವನ್ನು ಮರಳಿ ತರಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸ್ವಾತಿ ಮಲಿವಾಲ್ ದೌರ್ಜನ್ಯ ಪ್ರಕರಣ – ಬಿಭವ್ ಕುಮಾರ್ ಜಾಮೀನು ಅರ್ಜಿ ವಜಾ