ಆನೇಕಲ್‌ | ಹಾಡಹಗಲೇ ಮೈಕೈ ಮುಟ್ಟಿ ಯುವತಿಗೆ ಲೈಂಗಿಕ ಕಿರುಕುಳ – ಐವರ ವಿರುದ್ಧ ದೂರು

Public TV
1 Min Read
Anekal 2 2

ಆನೇಕಲ್‌: ಅಂಗಡಿಗೆ ಹೊರಟಿದ್ದ ಯುವತಿಗೆ ಮೈ ಕೈ ಮುಟ್ಟಿ ಹಾಡಹಗಲೇ ಲೈಂಗಿಕ ಕಿರುಕುಳ (Sexual harassment) ನೀಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ (Anekal) ತಾಲ್ಲೂಕಿನ ಮೈಲಸಂದ್ರ ಬಳಿಯಲ್ಲಿ ನಡೆದಿದೆ.

ಭಾನುವಾರ (ನಿನ್ನೆ) ಸಂಜೆ 4 ಗಂಟೆ ಸುಮಾರಿಗೆ ಬನ್ನೇರುಘಟ್ಟ ಪೊಲೀಸ್ ಠಾಣಾ (Bannerghatta Police Station) ವ್ಯಾಪ್ತಿಯ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ಗಾಂಜಾ ನಶೆಯಲ್ಲಿದ್ದ ಐದಾರು ಮಂದಿ ಕೃತ್ಯ ಎಸಗಿದ್ದಾರೆ. ಅಲ್ಲದೇ ಪ್ರತಿರೋಧ ತೋರಿದ ಯುವತಿ ಮೇಲೆ ಹಲ್ಲೆ ಕೂಡ ಮಾಡಿದ್ದಾರೆ. ಇದನ್ನೂ ಓದಿ: ಸಾಂಬಾರ್ ಮಾಡುವ ವಿಚಾರಕ್ಕೆ‌ ಸ್ನೇಹಿತರ ನಡುವೆ ಗಲಾಟೆ – ಕೊಲೆಯಲ್ಲಿ ಅಂತ್ಯ

Bannerghatta Police

ಸಂತ್ರಸ್ತ ಯುವತಿ ದಿನಸಿ ತರಲು ಹೋಗಿದ್ದರು. ಈ ವೇಳೆ ಗಾಂಜಾ (Ganja) ನಶೆಯಲ್ಲಿದ್ದ ಕಿರಾತಕರು ಅಡ್ಡಗಟ್ಟಿ ಆಕೆಯ ಮೈಕೈ ಮುಟ್ಟಿ ಎಳೆದಾಡಿದ್ದಾರೆ. ಯುವತಿ ಪ್ರತಿರೋಧ ತೋರಿದ್ದಕ್ಕೆ ನಡುರಸ್ತೆಯಲ್ಲೇ ಹಲ್ಲೆ ಕೂಡ ಮಾಡಿದ್ದಾರೆ. ಹೇಗೋ ಆಕೆ ಸ್ಥಳೀಯರ ನೆರವಿನಿಂದ ತಪ್ಪಿಸಿಕೊಂಡಿದ್ದಾಳೆ. ಈ ವೇಳೆ ಸ್ಥಳೀಯರ ಮೇಲೂ ಹಲ್ಲೆ ನಡೆಸಿದ ಕಿಡಿಗೇಡಿಗಳು ಯುವತಿಯ ಮನೆಗೆ ನುಗ್ಗಿ ಹಲ್ಲೆ ನಡೆಸಲು ಯತ್ನಿಸಿದ್ದಾರೆ.

Anekal 3

ಮಹಿಳೆ ಮತ್ತು ಸ್ಥಳೀಯರ ಮೇಲಿನ ಹಲ್ಲೆ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿ. ಈ ಸಂಬಂಧ ಬನ್ನೇರುಘಟ್ಟ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: Gadag | ಶಾಲಾ ಮೇಲ್ಛಾವಣಿ ಪದರ ಕುಸಿತ – ಓರ್ವ ಶಿಕ್ಷಕ, ಐವರು ವಿದ್ಯಾರ್ಥಿಗಳಿಗೆ ಗಾಯ

ಸಂತ್ರಸ್ತ ಯುವತಿ ಒಂದು ವಾರದ ಹಿಂದೆಯಷ್ಟೇ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ಬಾಡಿಗೆ ಮನೆಗೆ ಬಂದಿದ್ದಳು. ಅಣ್ಣ ವಾಸವಿದ್ದ ಮನೆ ಸಮೀಪದಲ್ಲೇ ಬಾಡಿಗೆ ಮನೆ ಪಡೆದು ವಾಸಿಸುತ್ತಿದ್ದಳು. ನಿನ್ನೆ ಸಂಜೆ ಒಬ್ಬಂಟಿಯಾಗಿ ಸಾಗುವಾಗ ಕಿಡಿಗೇಡಿಗಳು ನೀಚ ಕೃತ್ಯ ಎಸಗಿದ್ದಾರೆ. ಈ ಸಂಬಂಧ ನಿನ್ನೆ ಸಂಜೆಯೇ ದೂರು ನೀಡಿದ್ದರೂ ಪೊಲೀಸರು ಪ್ರಕರಣ ದಾಖಲಿಸಿಲ್ಲ, ಆರೋಪಿಗಳನ್ನು ವಶಕ್ಕೆ ಪಡೆಯುವ ಕೆಲಸವನ್ನೂ ಮಾಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಕದನ ಭೂಮಿಯಿಂದ ಓಡಿಹೋಗಲ್ಲ, ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ: ಬಿಆರ್ ಪಾಟೀಲ್

Share This Article