ಬೆಂಗಳೂರು: ಟಿಕೆಟ್ (Ticket) ಪಡೆದ ನಿಲ್ದಾಣ ಬರುವ ಮೊದಲೇ ಯುವತಿ (Young Woman) ಬಸ್ ಇಳಿಯಲು ಮುಂದಾಗಿದ್ದು, ಯುವತಿ ಹಾಗೂ ಕಂಡಕ್ಟರ್ (Conductor) ನಡುವೆ ಗಲಾಟೆ ನಡೆದ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.
ಶಕ್ತಿ ಯೋಜನೆ (Shakti Scheme) ಜಾರಿಗೆ ಬಂದಾಗಿನಿಂದ ಮಹಿಳಾ ಪ್ರಯಾಣಿಕರು ಹಾಗೂ ಕಂಡಕ್ಟರ್ ನಡುವಿನ ಜಟಾಪಟಿ ದಿನೇ ದಿನೇ ಹೆಚ್ಚುತ್ತಿದೆ. ಪ್ರಯಾಣಿಕರು ನಿಗದಿತ ಸ್ಥಳಕ್ಕೆ ಟಿಕೆಟ್ ಪಡೆದು ಸ್ಟಾಪ್ ಬರುವ ಮುನ್ನವೇ ಬಸ್ಸಿನಿಂದ ಇಳಿಯುತ್ತಿರುವ ಘಟನೆಗಳು ಹೆಚ್ಚಿದ್ದು, ಮಹಿಳಾ ಪ್ರಯಾಣಿಕರ ಈ ನಡೆಗೆ ನಿರ್ವಾಹಕರು ಸುಸ್ತಾಗಿದ್ದಾರೆ. ಅಲ್ಲದೇ ಮಹಿಳೆಯರ ನಡೆಯಿಂದ ನಿರ್ವಾಹಕರು ಈಗ ಇಕ್ಕಟ್ಟಿಗೆ ಸಿಲುಕುವಂತಾಗಿದೆ. ಇದನ್ನೂ ಓದಿ: ಮಂಡ್ಯ ಬಸ್ ಹತ್ತುವಾಗ ಹಿಂಬದಿ ಚಕ್ರಕ್ಕೆ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವು
Advertisement
Advertisement
ಅದೇ ರೀತಿ ಬಿಎಂಟಿಸಿಯಲ್ಲಿ (BMTC) ಯುವತಿ ಮತ್ತು ಕಂಡಕ್ಟರ್ ನಡುವೆ ಗಲಾಟೆ ನಡೆದಿದೆ. ಯುವತಿಯೋರ್ವಳು ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ಕಾಡುಬೀಸನಹಳ್ಳಿಗೆ ಟಿಕೆಟ್ ಪಡೆದಿದ್ದು, ಟಿಕೆಟ್ ಪಡೆದ ಸ್ಟಾಪ್‌ಗೂ ಮುನ್ನ ಅಗರ ಬಳಿ ಇಳಿಯಲು ಮುಂದಾಗಿದ್ದಾಳೆ. ಯುವತಿಯ ಈ ನಡೆಗೆ ಕಂಡಕ್ಟರ್ ಗರಂ ಆಗಿದ್ದಾರೆ. ಪ್ರಶ್ನೆ ಮಾಡಿದ್ದಕ್ಕೆ ಕಂಡಕ್ಟರ್ ಜೊತೆ ಯುವತಿ ವಾಗ್ವಾದ ಮಾಡಿದ್ದಾಳೆ. ಈ ಸಂದರ್ಭ ನಿರ್ವಾಹಕ ಘಟನೆಯ ವಿಡಿಯೋ ಚಿತ್ರೀಕರಣ ಮಾಡಿದ್ದಾನೆ. ಇದನ್ನೂ ಓದಿ: ಭದ್ರಾವತಿ ಬಿಜೆಪಿ ಕಾರ್ಯಕರ್ತನ ಕಾರು ಜಖಂ – ಮೂವರು ಆರೋಪಿಗಳು ಅರೆಸ್ಟ್
Advertisement
Advertisement
ಒಂದೊಮ್ಮೆ ಉಚಿತ ಟಿಕೆಟ್ ಪಡೆದ ಸ್ಥಳಕ್ಕಿಂತ ಹಿಂದೆಯೇ ಪ್ರಯಾಣಿಕರು ಇಳಿದರೆ, ಚೆಕ್ಕಿಂಗ್ ಅಧಿಕಾರಿಗಳು ಬಂದಾಗ ನಿರ್ವಾಹಕರು ದಂಡ ಕಟ್ಟಬೇಕಾಗುತ್ತದೆ. ಸದ್ಯ ಮಹಿಳಾ ಪ್ರಯಾಣಿಕರ ಈ ನಡೆಯಿಂದ ನಿರ್ವಾಹಕರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು – 11 ಎಕ್ಸ್‌ಪ್ರೆಸ್ ರೈಲುಗಳ ಮಾರ್ಗ ಬದಲಾವಣೆ