ಮದುವೆ ಆಗ್ತೀನಿ ಅಂತಾ ನಂಬಿಸಿ ಯುವತಿಯನ್ನು 7 ತಿಂಗಳ ಗರ್ಭಿಣಿ ಮಾಡಿ ಕೈಕೊಟ್ಟ

Public TV
1 Min Read
Bengaluru fraud man

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು 7 ತಿಂಗಳ ಗರ್ಭಿಣಿ ಮಾಡಿ ಯುವಕನೊಬ್ಬ ಕೈಕೊಟ್ಟಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

ಸಾಗರ್‌ ಎಂಬಾತ ಯುವತಿಯೊಬ್ಬಳಿಗೆ ವಂಚಿಸಿ ಪರಾರಿಯಾಗಿದ್ದಾನೆ. ಸಂತ್ರಸ್ತೆ ಲ್ಯಾಬ್‌ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದಳು. ಅದೇ ಲ್ಯಾಬ್‌ನಲ್ಲಿ ಸಾಗರ್‌ ಸಿಸ್ಟಮ್‌ ವರ್ಕ್‌ ಮಾಡಿಕೊಂಡಿದ್ದ. ಈ ವೇಳೆ ಯುವತಿಯನ್ನು ಪ್ರೀತಿ ಹೆಸರಿನಲ್ಲಿ ಪುಸಲಾಯಿಸಿ ಹಲವು ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಇದನ್ನೂ ಓದಿ: ತಾಯಿ, ಇಬ್ಬರು ಮಕ್ಕಳು ಮನೆಯಲ್ಲೇ ಸಜೀವ ದಹನ – ಎಸಿ ಸ್ಫೋಟ ಶಂಕೆ

love

ಯುವತಿ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ಕ್ರಿಯೆ ಕೂಡ ನಡೆಸಿದ್ದ. ಇದರಿಂದಾಗಿ ಯುವತಿ 7 ತಿಂಗಳ ಗರ್ಭಿಣಿಯಾಗಿದ್ದಳು. ವಿಚಾರ ತಿಳಿದು ಯುವತಿಗೆ ಬಲವಂತವಾಗಿ ಗರ್ಭಪಾತ ಮಾತ್ರೆ ನುಂಗಿಸಿದ್ದ. ಪರಿಣಾಮವಾಗಿ ಯುವತಿಗೆ ತೀವ್ರ ರಕ್ತಸ್ರಾವವಾಗಿ 7 ತಿಂಗಳ ಮಗು ಹೊರಬಂದಿತ್ತು. ನಂತರ ಚಿಕಿತ್ಸೆ ಫಲಿಸದೇ ಮಗು ಸಾವನ್ನಪ್ಪಿತು.

ವಿಚಾರ ತಿಳಿದ ಯುವತಿ ಪೋಷಕರು ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದರು. ಈ ವೇಳೆ ಯುವತಿ ಪೋಷಕರ ಜೊತೆ ರಾಜಿಗಿಳಿದು ಯುವತಿಗೆ ತಾಳಿ ಕಟ್ಟಿ ಮದುವೆಯಾಗಿದ್ದ. ನಂತರ ರಿಜಿಸ್ಟರ್ ಕಚೇರಿಯಲ್ಲಿ ಅಧಿಕೃತವಾಗಿ ಮದುವೆಯಾಗುವಂತೆ ಯುವತಿ ಕೇಳಿದ್ದಳು. ಈ ವೇಳೆ ಪೋನ್ ಸ್ವಿಚ್ ಆಫ್ ಮಾಡಿ ಆರೋಪಿ ಸಾಗರ್‌ ಎಸ್ಕೇಪ್‌ ಆಗಿದ್ದಾನೆ. ಇದನ್ನೂ ಓದಿ: ಈ ಬಾರಿ ಕಿಚಡಿ ಸರ್ಕಾರ ಬರಲ್ಲ, ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬರಲಿದೆ: ಸುಧಾಕರ್

ಘಟನೆ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿ ಸಾಗರ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *