ಉಡುಪಿ: ಅರಶಿನಗುಂಡಿ ಜಲಪಾತ ವೀಕ್ಷಣೆ ವೇಳೆ ಆಯತಪ್ಪಿ ಬಿದ್ದು ನಾಪತ್ತೆಯಾಗಿದ್ದ ಭದ್ರಾವತಿಯ ಯುವಕ ಒಂದು ವಾರದ ಬಳಿಕ ಮೃತದೇಹವಾಗಿ ಪತ್ತೆಯಾಗಿದ್ದಾನೆ.
ಭದ್ರಾವತಿಯ ಶರತ್ ಕುಮಾರ್ (23) ಮೃತದೇಹ ಪತ್ತೆಯಾಗಿದೆ. ಈತ ವಾರದ ಹಿಂದೆ ಕೊಲ್ಲೂರಿನ ಅರಶಿನಗುಂಡಿ ಜಲಪಾತ ವೀಕ್ಷಣೆ ಮಾಡುವಾಗ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದ. ಶರತ್ ಮೃತದೇಹ ಒಂದು ವಾರದ ಬಳಿಕ ಪತ್ತೆಯಾಗಿದೆ. ಇದನ್ನೂ ಓದಿ: ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ಸಾವು- ಮೊಬೈಲ್‍ನಲ್ಲಿ ಕೊನೇ ಕ್ಷಣ ಸೆರೆ
ಬಂಡೆ ಕಲ್ಲಿನ ಒಳಗಡೆ ಸಿಲುಕಿ ಮೃತದೇಹ ಸಿಲುಕಿಕೊಂಡಿತ್ತು. ಕೊಲ್ಲೂರು ಪೊಲೀಸರು, ಅಗ್ನಿಶಾಮಕ ದಳ, ಸ್ಥಳೀಯರ ಕಾರ್ಯಾಚರಣೆಯಿಂದ ಮೃತದೇಹ ಪತ್ತೆಯಾಗಿದೆ. ಜುಲೈ 23ರಂದು ಶರತ್ ಕಾಲು ಜಾರಿ ನಾಪತ್ತೆಯಾಗಿದ್ದ. ಘಟನಾ ಸ್ಥಳಕ್ಕೆ ಕೊಲ್ಲೂರು ಪಿಎಸ್‌ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಸಂಬAಧ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]