ಬೆಂಗಳೂರು/ಅನೇಕಲ್: ತಾಯಿಯನ್ನು ಕೊಂದು ಬಳಿಕ ಮಗನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಸೂರ್ಯಸಿಟಿ ಸಮೀಪದ ಹಳೆ ಚಂದಾಪುರದಲ್ಲಿ ನಡೆದಿದೆ.
ಮಹಾಲಕ್ಷ್ಮಿ (41) ಕೊಲೆಯಾದ ಮಹಿಳೆ. ರಮೇಶ್ (21) ತಾಯಿಯನ್ನ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಮಗ. ಚಿತ್ರದುರ್ಗ ಮೂಲದ ಚಳ್ಳಕೆರೆಯ ಚಿಕ್ಕಹಳ್ಳಿ ಕುಟುಂಬ, ಕಳೆದ ಕೆಲ ವರ್ಷಗಳ ಹಿಂದೆ ಕೆಲಸ ಅರಸಿಕೊಂಡು ಬಂದಿದ್ದರು. ಇದನ್ನೂ ಓದಿ: ಕೋಲಾರ | ಮದುವೆ ಮಾಡ್ಕೊಡಿ ಎಂದಿದ್ದಕ್ಕೆ ವಿವಾಹಿತನನ್ನು ಅಟ್ಟಾಡಿಸಿ ಕೊಂದ ಪ್ರೇಯಸಿ ಮನೆಯವ್ರು!
Advertisement
Advertisement
ಕುಟುಂಬ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಮಗ ಕುಡಿದು ಬಂದು ಆಗಾಗ್ಗೆ ಗಲಾಟೆ ಮಾಡುತ್ತಿದ್ದ. ನಿನ್ನೆ ರಾತ್ರಿಯೂ ಕುಡಿದು ಬಂದು ತಾಯಿ ಮಹಾಲಕ್ಷ್ಮಿ ಜೊತೆ ಗಲಾಟೆ ಮಾಡಿದ್ದ. ಗಲಾಟೆ ವಿಕೋಪಕ್ಕೆ ತಿರುಗಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಮೊಬೈಲ್ ಚಾರ್ಜಿಂಗ್ ವೈರ್‌ನಿಂದ ಕುತ್ತಿಗೆಗೆ ಬಿಗಿದು ತಾಯಿ ಹತ್ಯೆ ಮಾಡಿದ್ದಾನೆ.
Advertisement
Advertisement
ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಸೂರ್ಯನಗರ ಪೊಲೀಸರ ಮತ್ತು ಬೆಂಗಳೂರು ಗ್ರಾಮಾಂತರ ಎಎಸ್‌ಪಿ ನಾಗೇಶ್ ಕುಮಾರ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ಅತ್ತಿಬೆಲೆ ಆಕ್ಸ್‌ಫರ್ಡ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಕೇರಳ | ಮಹಿಳೆ, ಅವಳಿ ಮಕ್ಕಳ ಕೊಲೆ ಕೇಸ್ – 19 ವರ್ಷಗಳ ಬಳಿಕ ಇಬ್ಬರು ಮಾಜಿ ಸೈನಿಕರು ಅರೆಸ್ಟ್!