– ಕಣ್ಣಿಗೆ ಖಾರದ ಪುಡಿ ಎರಚಿ, ಕತ್ತು ಹಿಸುಕಿ ಕೊಲೆ
ಹುಬ್ಬಳ್ಳಿ: ಇನ್ನೂ 6 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವಕ ಭೀಕರವಾಗಿ ಕೊಲೆಯಾಗಿ ಮಸಣಕ್ಕೆ ಸೇರಿದ ಘಟನೆ ಧಾರವಾಡ (Dharwad) ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಯುವಕ ನಿಂಗಪ್ಪ ಬೂದಪ್ಪ ನವಲೂರ (28) ಕೊಲೆಯಾಗಿದ್ದಾನೆ (Murder). ಇದನ್ನೂ ಓದಿ: ಇಂದು ಕಾಂಗ್ರೆಸ್ ಗ್ಯಾರಂಟಿಗೆ ಗುಡ್ಫ್ರೈಡೇ; ಕುತೂಹಲ ಮೂಡಿಸಿದ ಸಚಿವ ಸಂಪುಟ ಸಭೆ – ಐದರ ಪೈಕಿ 3 ಫ್ರೀ ಸ್ಕೀಂ ಘೋಷಣೆ?
Advertisement
Advertisement
ಮೃತ ಯುವಕನಿಗೆ ಜೂನ್ 7 ರಂದು ತಾವರಗೇರೆ ಗ್ರಾಮದ ಯುವತಿ ಜೊತೆ ಮದುವೆ (Marriage) ನಿಶ್ಚಿಯವಾಗಿತ್ತು. ನಿಂಗಪ್ಪ ತೋಟದ ಮನೆಯಲ್ಲಿದ್ದಾಗ ಮಧ್ಯರಾತ್ರಿ ದಾಳಿ ಮಾಡಿದ ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿ, ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಆಡಳಿತ ಮಂಡಳಿಯವರು ಮಾಡಿದ ಸಾಲಕ್ಕೆ ಶಾಲೆಯನ್ನೇ ಸೀಜ್ ಮಾಡಿದ ಬ್ಯಾಂಕ್ ಸಿಬ್ಬಂದಿ!
Advertisement
Advertisement
ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ, ಸ್ಥಳಕ್ಕೆ ಕಲಘಟಗಿ ಪೊಲೀಸರ (Kalaghatagi Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.