ಬೆಂಗಳೂರು: ಮದುವೆಗೆ ಒಪ್ಪದ ಯುವತಿಗೆ ಪ್ರಿಯತಮ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ಜೆಜೆ ನಗರದಲ್ಲಿ ನಡೆದಿದೆ.
ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಯುವಕ ಅಜಯ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಘಟನೆ ನಡೆದಿದೆ.
Advertisement
ಯುವಕ ಮತ್ತು ಯುವತಿ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಮದುವೆಗೂ ಎಲ್ಲಾ ಸಿದ್ಧತೆ ನಡೆದಿತ್ತು. ಆದರೆ, ಕೊನೆ ಘಳಿಗೆಯಲ್ಲಿ ಯುವತಿ ಮದುವೆಗೆ ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ಪ್ರಿಯಕರ, ಯುವತಿಗೆ ಚಾಕುವಿನಿಂದ ಇರಿದಿದ್ದಾನೆ.
Advertisement
ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿದ್ದ ಜೆಜೆ ನಗರ ಪೊಲೀಸರಿಂದ ಆರೋಪಿಯನ್ನು ಬಂಧಿಸಿದ್ದಾರೆ.