‘ಜವಾನ್’ ಡೈರೆಕ್ಟರ್ ಅಟ್ಲಿ (Atlee) ಜೊತೆ ಅಲ್ಲು ಅರ್ಜುನ್ (Allu Arjun) ಸಿನಿಮಾ ಮಾಡೋದರ ಬಗ್ಗೆ ಅಧಿಕೃತ ಘೋಷಣೆ ಆಗಿದೆ. ಈ ಬೆನ್ನಲ್ಲೇ ಸಿನಿಮಾದ ಬಜೆಟ್ ಬಗ್ಗೆ ಚರ್ಚೆ ಶುರುವಾಗಿದೆ. ಅಲ್ಲು ಅರ್ಜುನ್ ಸಿನಿಮಾವನ್ನು ಅದ್ಧೂರಿಯಾಗಿ 800 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಿದ್ದಾರೆ ಎನ್ನಲಾದ ವಿಚಾರವೊಂದು ಈಗ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ:ಅಂದುಕೊಂಡಿದ್ದಕ್ಕಿಂತಲೂ ಹೆಚ್ಚಿನ ಗಾಯಗಳಾಗಿದೆ: ಪುತ್ರನ ಹೆಲ್ತ್ ಬಗ್ಗೆ ಅಪ್‌ಡೇಟ್ ಕೊಟ್ಟ ಪವನ್ ಕಲ್ಯಾಣ್
‘ಪುಷ್ಪ 2’ ಸಕ್ಸಸ್ ಬಳಿಕ ಅಟ್ಲಿ ಜೊತೆ ಸಿನಿಮಾ ಮಾಡಲು ಅಲ್ಲು ಅರ್ಜುನ್ ಮುಂದಾಗಿದ್ದಾರೆ. ಅದಕ್ಕಾಗಿ ಅಟ್ಲಿ ಜೊತೆ ವಿದೇಶಕ್ಕೆ ತೆರಳಿ VFX ತಂತ್ರಜ್ಞರೊಂದಿಗೆ ಅಲ್ಲು ಅರ್ಜುನ್ ಮಾತನಾಡಿದ್ದಾರೆ. ವಿಎಫ್‌ಎಕ್ಸ್‌ಗಾಗಿ ನಟನ ಮುಖದ ಮತ್ತು ದೇಹದ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ. ಹಾಗಾಗಿ ಹಾಲಿವುಡ್ ರೇಂಜ್‌ನಲ್ಲಿ ಅದ್ಧೂರಿಯಾಗಿ ಗ್ರಾಫಿಕ್ಸ್ ಮೂಡಿ ಬರಲಿದೆ ಎಂಬ ಸುಳಿವು ಸಿಕ್ಕಿದೆ. ಇದನ್ನೂ ಓದಿ:ಭರತನಾಟ್ಯ ಪ್ರವೀಣೆ ಚರಿತ್ರಾಗೀಗ ಇಂಟರ್ವಲ್‌ನದ್ದೇ ಧ್ಯಾನ!
View this post on Instagram
ಹೀಗಿರುವಾಗ ಅಟ್ಲಿ ಜೊತೆಗಿನ ಅಲ್ಲು ಅರ್ಜುನ್ ಸಿನಿಮಾ 800 ಕೋಟಿ ರೂ. ಬಜೆಟ್‌ನಲ್ಲಿ ಬರಲಿದೆ ಎಂಬ ಸುದ್ದಿ ಈಗ ಸಿಕ್ಕಾಪಟ್ಟೆ ಚರ್ಚೆ ನಡೆಯುತ್ತಿದೆ. ಅದರಲ್ಲಿ 175 ಕೋಟಿ ರೂ. ಸಂಭಾವನೆಯನ್ನು ಅಲ್ಲು ಅರ್ಜುನ್ ಚಾರ್ಜ್ ಮಾಡಿದ್ದಾರೆ ಎನ್ನಲಾಗಿದೆ. ಒಟ್ನಲ್ಲಿ ದುಬಾರಿ ವೆಚ್ಚದಲ್ಲಿ ಸಿನಿಮಾ ಬರುತ್ತಿದೆ ಎಂದು ಕೇಳಿಯೇ ಫ್ಯಾನ್ಸ್ ದಂಗಾಗಿದ್ದಾರೆ. ಸಿನಿಮಾ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ.