ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾಗಿರುವ ಅನ್ನಭಾಗ್ಯ ಯೋಜನೆಯ (Annabhagya Scheme) 5 ಕೆ.ಜಿ ಅಕ್ಕಿ ಹಾಗೂ ಉಳಿದ 5 ಕೆ.ಜಿ ಅಕ್ಕಿಯ ಹಣ ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದೀಗ ಈ ಹಣಕ್ಕಾಗಿ ಅಧಾರ್ ಲಿಂಕ್ (Aadhaar Card Link) ಕಡ್ಡಾಯವಾಗಿರುತ್ತದೆ.
ಹೌದು. ಅನ್ನಭಾಗ್ಯದ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮೆ ಆಗಬೇಕಾದರೆ ಬ್ಯಾಂಕ್ ಖಾತೆ (Bank Account) ಜೊತೆ ಆಧಾರ್ ಲಿಂಕ್ ಕಡ್ಡಾಯವಾಗಿ ಆಗಿರಬೇಕು. ಬಿಪಿಎಲ್ (BPL Card) ಪಡಿತರ ಚೀಟಿಯನ್ನು ನೀವು ಹೊಂದಿರಬೇಕು. ಪಡಿತರ ಚೀಟಿಯಲ್ಲಿ (Ration Card) ಮನೆ ಮುಖ್ಯಸ್ಥರು ಯಾರು ಅನ್ನೋದು ಕಾರ್ಡ್ ನಲ್ಲಿ ನಮೂದಾಗಿರುತ್ತದೆ. ಮನೆಯ ಮುಖ್ಯಸ್ಥರು ಸಾಮಾನ್ಯವಾಗಿ ಮಹಿಳೆಯರೇ ಆಗಿರುತ್ತಾರೆ. ಮನೆ ಯಜಮಾನಿಯ ಹೆಸರಿನಲ್ಲಿ ಬ್ಯಾಂಕ್ ಅಕೌಂಟ್ ಖಾತೆ ಇರಬೇಕು. ಇದನ್ನೂ ಓದಿ: PAN-Aadhaar Card ಇಂದೇ ಲಿಂಕ್ ಮಾಡಿಸಿಕೊಳ್ಳಿ- ಶುಕ್ರವಾರ ಕೊನೆಯ ದಿನ
- Advertisement
ಬ್ಯಾಂಕ್ ಖಾತೆ ಮಾತ್ರವಲ್ಲ, ಖಾತೆಗೆ ಆಧಾರ್ ನಂಬರ್ ಕಡ್ಡಾಯವಾಗಿ ಲಿಂಕ್ ಆಗಿರಬೇಕು. ಒಂದು ವೇಳೆ ಮನೆಯ ಮುಖ್ಯಸ್ಥರದ್ದು ಇಲ್ಲದೇ ಹೋದಲ್ಲಿ, ಪಡಿತರ ಚೀಟಿಯಲ್ಲಿರುವ ಯಾವುದಾದ್ರೂ ಒಬ್ಬರ ಹೆಸರಿನಲ್ಲಿ ಖಾತೆ ಆಧಾರ್ ಲಿಂಕ್ ಆಗಿದ್ರೂ ಆಗುತ್ತೆ. ಧನಭಾಗ್ಯಕ್ಕಾಗಿ ಪ್ರತ್ಯೇಕ ಅರ್ಜಿ ಸಲ್ಲಿಕೆ ಮಾಡಬೇಕಿಲ್ಲ. ಆದರೆ ಆಧಾರ್ ಲಿಂಕ್ಡ್ ಬ್ಯಾಂಕ್ ಖಾತೆ ವಿವರ ಮಾತ್ರ ಕಡ್ಡಾಯವಾಗಿರುತ್ತದೆ. ಇದನ್ನೂ ಓದಿ: ಆಟೋದಲ್ಲಿ ಬಂದಿದ್ದಕ್ಕೆ ಬಿರಿಯಾನಿ ವಾಪಸ್ – ಬೆಂಜ್ ಕಾರ್‌ಗೆ ಶಿಫ್ಟ್ ಮಾಡಿ ಸಿಎಂ ನಿವಾಸಕ್ಕೆ ಕಳುಹಿಸಿದ ಜಮೀರ್
- Advertisement
ಆಹಾರ ಇಲಾಖೆ ಮಾಹಿತಿ ಪ್ರಕಾರ, ಸದ್ಯ 1.28 ಫಲಾನುಭವಿಗಳು ಇದ್ದು ಅದರಲ್ಲಿ 6 ಲಕ್ಷ ಖಾತೆದಾರರ ಆಕೌಂಟ್ ಸಮಸ್ಯೆ ಹಾಗೂ ಅಧಾರ್ ಲಿಂಕ್ ಆಗದೇ ಇರುವ ಸಮಸ್ಯೆ ಇದೆ. ಹೀಗಾಗಿ ಜುಲೈ 1 ನಲ್ಲಿ ಇವರಿಗೆ ದುಡ್ಡು ಕೊಡೋಕೆ ಸಮಸ್ಯೆಯಾಗಬಹುದು. ಅಕೌಂಟ್, ಆಧಾರ್ ಲಿಂಕ್ ಮಾಡಿಸಿದ ಬಳಿಕವಷ್ಟೇ ದುಡ್ಡು ನೇರವಾಗಿ ಡಿಬಿಟಿ ಮೂಲಕ ಜಮೆಯಾಗುತ್ತೆ ಅಂತಾ ಅಧಿಕಾರಿಗಳು ಹೇಳಿದ್ದಾರೆ.
ಮನೆ ಯಜಮಾನಿ 92% ಮಹಿಳೆಯರೇ ಆಗಿರೋದ್ರಿಂದ ಗೃಹಲಕ್ಷ್ಮಿಗೂ (Gruhalakshmi) ಮುಂಚಿತ ಆಗಿ ಅನ್ನಭಾಗ್ಯದ ದುಡ್ಡು ಮಹಿಳೆಯರಿಗೆ ಜಾಕ್ ಫಾಟ್ ಹೊಡೆಯಲಿದೆ. ಮನೆಯ ಮುಖ್ಯಸ್ಥರ ಹೆಸರಿನಲ್ಲಿ ಖಾತೆಗಳು ಇಲ್ಲದೇ ಇದ್ದರೆ ಕುಟುಂಬದ ಬೇರೆ ಸದಸ್ಯರ ಖಾತೆಯ ವಿವರವನ್ನು ಕೊಡಬಹುದು.
Web Stories