LatestNational

ಆಧಾರ್ ಗೆ ಸಾಂವಿಧಾನಿಕ ಮಾನ್ಯತೆ: ಯಾವುದಕ್ಕೆ ಕಡ್ಡಾಯ?

ನವದೆಹಲಿ: ಸರ್ಕಾರಿ ಸೌಲಭ್ಯಗಳ ಪಡೆಯಲು ‘ಆಧಾರ್’ ಬೇಕೋ ಅಥವಾ ಬೇಡವೋ ಎಂಬ ಗೊಂದಲಗಳಿಗೆ ಇಂದು ಸುಪ್ರೀಂಕೋರ್ಟ್ ತೆರೆ ಎಳೆದಿದೆ. ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ಎ ಕೆ ಸಿಕ್ರಿ, ಎ.ಎಂ.ಖಾನ್ವಿಲ್ಕರ್,  ಅಶೋಕ್‍ಭೂಷಣ್ ಪೀಠ  ಆಧಾರ್ ಸಾಂವಿಧಾನಿಕ ಮಾನ್ಯತೆಯನ್ನು ಎತ್ತಿ ಎತ್ತಿ ಹಿಡಿದಿದೆ.

ಆಧಾರ್ ಮೇಲಿನ ದಾಳಿ ಸಂವಿಧಾನದ ಮೇಲೆ ದಾಳಿ ನಡೆಸಿದಂತೆ ಆಗುತ್ತದೆ. ಆಧಾರ್ ವಿಶಿಷ್ಟವಾಗಿರುವುದೇ ಉತ್ತಮವಾಗಿದ್ದು, ಈಗಾಗಲೇ ಆಧಾರ್ ಜನ ಸಾಮನ್ಯ ಬಳಿ ತಲುಪಿದ್ದು, ಅದು ದೇಶದ ಗುರುತಿನ ಪತ್ರವಾಗಿದೆ. ಈಗ ಆಧಾರ್ ವಿರೋಧಿಸಿದರೆ ಕೈಯಲ್ಲಿರುವ ಮಗುವನ್ನ ಎಸೆದಂತೆ. ಆಧಾರ್ ವಿರೋಧಿಸಿದ್ರೆ ಸಂವಿಧಾನ ವಿರೋಧಿಸಿದಂತೆ ಎಂದು  ಕೋರ್ಟ್ ಹೇಳಿದೆ.

ಯಾವುಕ್ಕೆ ಆಧಾರ್ ಬೇಕು..?
1. ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಆಧಾರ್ ಕಡ್ಡಾಯ.
2. ಪ್ಯಾನ್, ಆದಾಯ ತೆರಿಗೆ (ಐಟಿ ರಿಟರ್ನ್ಸ್), ಆಸ್ತಿ ಖರೀದಿಗೆ ಆಧಾರ್ ಕಡ್ಡಾಯ.
3. ಪ್ಯಾನ್ ನಂಬರ್ ಗೆ ಅಧಾರ್ ಕಡ್ಡಾಯವಾಗಿ ಲಿಂಕ್ ಮಾಡಲೇಬೇಕು.
4. ಸರ್ಕಾರಕ್ಕೆ ಸಂಬಂಧಿಸಿದ ಎಲ್ಲ ವ್ಯವಹಾರಗಳಿಗೆ ಆಧಾರ್ ಕಡ್ಡಾಯ ಸಲ್ಲಿಸುವುದು.

ಯಾವುದಕ್ಕೆ ಬೇಡ..?
1. ಖಾಸಗಿ ಸಂಸ್ಥೆಗಳು ಆಧಾರ್ ಕೇಳುವಂತಿಲ್ಲ
2. ಆಧಾರ್ ಮಾಹಿತಿ ಅಥವಾ ದತ್ತಾಂಶವನ್ನು 6 ತಿಂಗಳಕ್ಕೂ ಹೆಚ್ಚಿನ ಕಾಲ ಸಂಗ್ರಹಿಸಿಟ್ಟುಕೊಳ್ಳುವಂತಿಲ್ಲ.
3. ಎಲ್ಲ ಬ್ಯಾಂಕ್‍ಗಳಿಗೆ ಆಧಾರ್ ಮಾಹಿತಿ ಕೊಡುವಂತಿಲ್ಲ.
4. ಸೆಕ್ಷನ್ 7ರ ಪ್ರಕಾರ ಶಾಲೆಗಳ ಪ್ರವೇಶಾತಿ ವೇಳೆ ಆಧಾರ್ ಕೊಡುವ ಅಗತ್ಯವಿಲ್ಲ.
5. ಸಿಬಿಎಸ್‍ಸಿ, ಯುಜಿಸಿ, ನೀಟ್ ಪರೀಕ್ಷೆಗಳಿಗೆ ಆಧಾರ್ ಕಡ್ಡಾಯವಲ್ಲ.
6. ಸಿಮ್ ಖರೀದಿ, ಪೇಟಿಎಂ, ಫೋನ್ ಪೇ ಸೇರಿದಂತೆ ಡಿಜಿಟಲ್ ಪೇಮೆಂಟ್ ಆ್ಯಪ್ ಗಳಿಗೆ ಕಡ್ಡಾಯವಲ್ಲ.
7. ಸೆಕ್ಷನ್ 2(ಬಿ) ಅಕ್ರಮ ವಲಸಿಗರಿಗೆ ಆಧಾರ್ ಕೊಡುವಂತಿಲ್ಲ.
8. ಮೊಬೈಲ್ ಮತ್ತು ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡುವ ಅವಶ್ಯಕತೆಯಿಲ್ಲ.

ಕರ್ನಾಟಕ ಹೈ ಕೋರ್ಟ್ ನಿವೃತ್ತ ನ್ಯಾಯಾಮೂರ್ತಿ ಕೆ ಎಸ್ ಪುಟ್ಟಸ್ವಾಮಿ ಎಂಬವರು 2012ರಲ್ಲಿ `ಆಧಾರ್’ನ ಸಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಸಂಸತ್ತಿನಲ್ಲಿ ಮಸೂದೆಯನ್ನೇ ಅಂಗೀಕರಿಸದೇ ಆಧಾರ್ ಜಾರಿಗೊಳಿಸಲಾಗಿದೆ. ಆಧಾರ್‍ಗೆ ಕಾನೂನಿನ ಮಾನ್ಯತೆಯೇ ಇಲ್ಲ, ಆಧಾರ್ ಕಾಯ್ದೆಯೂ ಇಲ್ಲ. ಈ ಮೂಲಕ ಪ್ರತಿಯೊಬ್ಬ ನಾಗರಿಕರ ಖಾಸಗಿ ಮಾಹಿತಿಗಳಿಗೆ ರಕ್ಷಣೆ ಎಲ್ಲಿದೆ ಎಂದು ಅರ್ಜಿಯಲ್ಲಿ ಪುಟ್ಟಸ್ವಾಮಿಯವರು ಉಲ್ಲೇಖಿಸಿದ್ದರು.

2009ರಲ್ಲಿ ಯುಪಿಎ ಸರ್ಕಾರ ಆಧಾರ್ ಪ್ರಾಧಿಕಾರ ಸ್ಥಾಪನೆ ಮಾಡಿತ್ತು. ಈ ಮೂಲಕ ಭಾರತದ ಪ್ರತಿಯೊಬ್ಬ ನಾಗಕರಿಕನಿಗೂ ವಿಶಿಷ್ಟ ಗುರುತಿನ ಚೀಟಿ, ಸಂಖ್ಯೆ ನೀಡುವುದು ಯುಪಿಎ ಸರ್ಕಾರದ ಉದ್ದೇಶವಾಗಿತ್ತು. ಈ ಸಂಬಂಧ 2010ರಲ್ಲಿ ರಾಜ್ಯಸಭೆಯಲ್ಲಿ ರಾಷ್ಟ್ರೀಯ ಗುರುತು ಪ್ರಾಧಿಕಾರ ಮಸೂದೆ ಮಂಡನೆಯಾಗಿತ್ತು. ನಂತರ ರಾಜ್ಯಸಭೆಯಿಂದ ಸ್ಥಾಯಿ ಸಮಿತಿಗೆ ಮಸೂದೆ ಹಸ್ತಾಂತರಿಸಲಾಗಿತ್ತು. ಆದ್ರೆ ಸ್ಥಾಯಿ ಸಮಿತಿಯಲ್ಲಿ ಆಧಾರ್ ಕಾನೂನಿನ ಮಾನ್ಯತೆಯೇ ಇಲ್ಲವಾಗಿತ್ತು. ಈ ಹಿನ್ನೆಲೆಯಲ್ಲಿ ಪುಟ್ಟಸ್ವಾಮಿ ‘ಆಧಾರ್’ನ ಸಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

ಇದೂವರೆಗೂ ಸುಪ್ರೀಂ ಕೋರ್ಟ್ ತೀರ್ಪಿನ ವರದಿ ನನ್ನ ಕೈ ಸೇರಿಲ್ಲ. ಕೇವಲ ಮಾಧ್ಯಮಗಳಿಂದ ಮಾಹಿತಿ ತಿಳಿಯುತ್ತಿದೆ. ತೀರ್ಪಿನ ಸಂಪೂರ್ಣ ವರದಿ ಓದಿದ ಮೇಲೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ಅರ್ಜಿದಾರ ಪುಟ್ಟಸ್ವಾಮಿ ತಿಳಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

https://twitter.com/ANI/status/1044830157696126977

https://twitter.com/ani_digital/status/1044833527362199552

Leave a Reply

Your email address will not be published.

Back to top button