LatestLeading NewsMain PostNational

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಜೊತೆ ಹೆಜ್ಜೆ ಹಾಕಿದ ಆದಿತ್ಯ ಠಾಕ್ರೆ

ಮುಂಬೈ: ಕಾಂಗ್ರೆಸ್ (Congress) ನೇತೃತ್ವದ ಭಾರತ್ ಜೋಡೋ ಯಾತ್ರೆ (Bharat Jodo Yatra) ಇಂದು ಮಹಾರಾಷ್ಟ್ರದ (Maharashtra) ನಂದೇಡ್ ಜಿಲ್ಲೆಯಲ್ಲಿ ಸಾಗುತ್ತಿದ್ದು, ಈ ವೇಳೆ ಶಿವಸೇನೆ ಮುಖಂಡ ಹಾಗೂ ಮಹಾರಾಷ್ಟ್ರದ ಮಾಜಿ ಸಚಿವ ಆದಿತ್ಯ ಠಾಕ್ರೆ (Aaditya Thackeray) ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರೊಂದಿಗೆ ಹೆಜ್ಜೆ ಹಾಕಿದ್ದಾರೆ.

ಭಾರತ್ ಜೋಡೋ ಯಾತ್ರೆ ನಗರದ ಹಿಂಗೋಲಿಯ ಕಳಮ್ನೂರಿನಲ್ಲಿ ಸಾಗುತ್ತಿದ್ದ ಸಂದರ್ಭ ಆದಿತ್ಯ ಠಾಕ್ರೆ ಪಾದಯಾತ್ರೆಗೆ ಸೇರ್ಪಡೆಗೊಂಡರು. ಆದಿತ್ಯ ಠಾಕ್ರೆ ಅವರನ್ನು ಪಕ್ಷದ ಸಹೋದ್ಯೋಗಿಗಳಾದ ರಾಜ್ಯ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಅಂಬಾದಾಸ್ ದಾನ್ವೆ ಹಾಗೂ ಮಾಜಿ ಶಾಸಕ ಸಚಿನ್ ಅಹಿರ್ ಬರಮಾಡಿಕೊಂಡರು. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದ ವ್ಯಕ್ತಿಗೆ ಟ್ರಕ್ ಗುದ್ದಿ ಸಾವು – ರಾಹುಲ್ ಸಂತಾಪ

ಕಾಂಗ್ರೆಸ್ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಪಾದಯಾತ್ರೆ 65ನೇ ದಿನಕ್ಕೆ ಕಾಲಿಟ್ಟಿದೆ. ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಕೂಡಾ ಲೇಹ್‌ನಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಲು ಆಹ್ವಾನ ನೀಡಲಾಗಿದೆ. ಈ ಮೂಲಕ ಈ 2 ಪಕ್ಷಗಳು ವಿಭಿನ್ನ ಸಿದ್ಧಾಂತಗಳೊಂದಿಗೆ ಒಟ್ಟಾಗಿ ಕಾರ್ಯಕ್ರಮಗಳನ್ನು ನಡೆಸಲು ಒಪ್ಪಿಕೊಂಡಿವೆ. ಇದನ್ನೂ ಓದಿ: ಧರ್ಮವೀರ ಸಂಭಾಜಿ ಮಹಾರಾಜರಿಗೆ ಸತೀಶ್ ಜಾರಕಿಹೊಳಿ ಅಪಮಾನ ಮಾಡಿದ್ದಾರೆ: ದೇವೇಂದ್ರ ಫಡ್ನವೀಸ್

Live Tv

Leave a Reply

Your email address will not be published. Required fields are marked *

Back to top button