ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ (Dehli Assembly Election) ಬಿಜೆಪಿ 27 ವರ್ಷಗಳ ಬಳಿಕ ಗೆಲವು ಸಾಧಿಸಿದೆ. ಈ ಮೂಲಕ ದೆಹಲಿ ಜನ ಕೇಜ್ರಿವಾಲ್ ನಶೆ ಇಳಿಸುವುದರ ಜೊತೆಗೆ ಎಣ್ಣೆ ಏಟಿಗೆ ಎಎಪಿ (AAP) ಪಕ್ಷಕ್ಕೆ ಸೋಲಿನ ಕಿಕ್ ನೀಡಿದ್ದಾರೆ.
2014ರ ಲೋಕಸಭೆ ಚುನಾವಣೆ ವೇಳೆ ದೆಹಲಿಯಲ್ಲಿ ಎಎಪಿ ಒಂದು ಸೀಟನ್ನು ಗೆದ್ದರಲಿಲ್ಲ. ಆದರೆ 2015ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಆಪ್ 70ರಲ್ಲಿ 67 ಸೀಟುಗಳನ್ನು ಗೆದ್ದು ದಾಖಲೆ ನಿರ್ಮಿಸಿತ್ತು. 2019ರ ಲೋಕಸಭೆ ಚುನಾವಣೆಯಲ್ಲೂ ಒಂದು ಸೀಟು ಗೆಲ್ಲದ ಎಎಪಿ 2020ರ ವಿಧಾನಸಭೆ ಚುನಾವಣೆಯಲ್ಲಿ 63 ಸೀಟುಗಳನ್ನು ಗೆದ್ದು ಬೀಗಿತ್ತು.ಇದನ್ನೂ ಓದಿ: ಜನರ ತೀರ್ಪು ಸ್ವಾಗತಿಸುತ್ತೇವೆ.. ಸೋಲನ್ನ ಹೀನಾಯ ಸೋಲು ಎಂದು ಹೇಳಲ್ಲ: ಮುಖ್ಯಮಂತ್ರಿ ಚಂದ್ರು
ಈ ಸಂದರ್ಭದಲ್ಲಿ ದೆಹಲಿ ಜನತೆ ಕೇಂದ್ರಕ್ಕೆ ಬಿಜೆಪಿ ಮತ್ತು ಸ್ಥಳೀಯವಾಗಿ ಎಎಪಿ ಎಂಬ ತೀರ್ಮಾನಿಸಿದೆ ಎನ್ನಲಾಗಿತ್ತು. ಆದರೆ ಇದೀಗ 2025ರ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಎಲ್ಲವೂ ತಿರುಗಿ ಬಿದ್ದಿದೆ.
ಕಳೆದೆರಡು ವರ್ಷಗಳಲ್ಲಿ ಎಎಪಿ ಪಕ್ಷಕ್ಕೆ ಹಗರಣದ ಅಲೆಗಳು ಅಪ್ಪಳಿಸಿದ್ದವು. ಮದ್ಯ ಹಗರಣದಲ್ಲಿ ಡಿಸಿಎಂ ಮನೀಷ್ ಸಿಸೋಡಿಯಾ, ರಾಜ್ಯಸಭೆ ಸದಸ್ಯ ಸಂಜಯ್ ಸಿಂಗ್, ಸಿಎಂ ಅರವಿಂದ್ ಕೇಜ್ರಿವಾಲ್ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಆರೋಪಿಗಳಾಗಿ ಜೈಲು ಸೇರಿದ್ದರು. ಈ ಮೂಲಕ ಸಚಿವರು ಸಾಲು ಸಾಲಾಗಿ ಹಗರಣದಲ್ಲಿ ಸಿಲುಕಿ ಜೈಲು ಸೇರಿ ಆಮ್ ಆದ್ಮಿ ಪಕ್ಷದ ವಿಶ್ವಾಸಾರ್ಹತೆಗೆ ಹಾನಿ ಎಸಗಿದರು.
ಈ ನಡುವೆ `ಜೈಲ್ ಕಾ ಜವಾಬ್ ವೋಟ್ ಸೇ’ ಎಂದು ದೆಹಲಿಯಲ್ಲಿ ಪ್ರಚಾರ ನಡೆಸಿದ್ದರು. ಆದರೂ ಕೇಜ್ರಿವಾಲ್ ಅನುಕಂಪದ ಕ್ಯಾಂಪೇನ್‌ಗೆ ದೆಹಲಿ ಜನರು ಕರಗಲಿಲ್ಲ. ಕಡೆಗೂ ಎಣ್ಣೆ ಏಟಿಗೆ ಕೇಜ್ರಿವಾಲ್ ತಂಡ ನರಳಿ, ಕಿಕ್ ಇಳಿಸುವ ಮೂಲಕ ಮೋದಿ ತಂಡ ಗೆದ್ದು ಬೀಗಿದೆ.ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಶಾಕ್- ನಾಳೆಯಿಂದಲೇ ದರ ಏರಿಕೆ ಜಾರಿ – ಎಷ್ಟು ಕಿ.ಮೀಗೆ ಎಷ್ಟು ದರ?